ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಹಿಳೆಯ ಮಾಂಗಲ್ಯ ಸರ ಕದ್ದು ಎಸ್ಕೇಪ್!
ಮಾದನಾಯಕನಹಳ್ಳಿ ಪೊಲೀಸ್ ಠಾಣಾವ್ಯಾಪ್ತಿಯ ದಾಸನಪುರದಲ್ಲಿ ಸರಗಳ್ಳತನ ಪ್ರಕರಣ ವರದಿಯಾಗಿದೆ. ಅಂಗಡಿಯೊಂದಕ್ಕೆ ಬಂದ ವ್ಯಕ್ತಿ ಟೀ, ಸಿಗರೇಟ್ ಕೇಳುವ ನೆಪದಲ್ಲಿ ಮಹಿಳೆ ಗಮನ ಬೇರೆಡೆ ಸೆಳೆದು ಕತ್ತಿನಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಹಳದಿ ಬೋರ್ಡ್ ಕಾರಿನಲ್ಲಿ ಬಂದಿದ್ದ ಆರೋಪಿಯ ಚಲನವಲನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ನೆಲಮಂಗಲ, ಫೆಬ್ಬರವರಿ 02: ಬೆಂಗಳೂರಿನಲ್ಲಿ ಸರಗಳ್ಳರ ಹಾವಳಿ ನಿರಂತರವಾಗಿ ಹೆಚ್ಚಾಗುತ್ತಿದೆ. ಮಾದನಾಯಕನಹಳ್ಳಿಯ ದಾಸನಪುರದಲ್ಲಿ ಇಂತಹದೇ ಒಂದು ಘಟನೆ ನಡೆದಿದ್ದು, ಟೀ ಮತ್ತು ಸಿಗರೇಟ್ ಕೇಳುವ ನೆಪದಲ್ಲಿ ಅಂಗಡಿಗೆ ಬಂದ ವ್ಯಕ್ತಿಯೋರ್ವ ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಹಳದಿ ಬೋರ್ಡ್ ಕಾರಿನಲ್ಲಿ ಇಬ್ಬರು ಬಂದಿದ್ದು, ಆ ಪೈಕಿ ಒಬ್ಬ ಕಾರಿನಿಂದ ಇಳಿದು ಅಂಗಡಿಗೆ ಬಂದು ಟೀ ಮತ್ತು ಸಿಗರೇಟ್ ಬೇಕು ಎಂದು ಕೇಳಿದ್ದಾನೆ. ನಂತರ ಫೋನ್ ಪೇ ಮೂಲಕ ಹಣ ಪಾವತಿಸುವುದಾಗಿ ಹೇಳಿ, ಕ್ಯೂಆರ್ ಕೋಡ್ ಕೇಳಿದ್ದಾನೆ. ಅಂಗಡಿಯಲ್ಲಿದ್ದ ನಾಗರತ್ನಮ್ಮ ಅವರು ತಮ್ಮ ಮೊಬೈಲ್‌ನಲ್ಲಿ ಸ್ಕ್ಯಾನರ್ ತೆಗೆಯಲು ಸಿದ್ಧರಾದಾಗ, ಆತ ಅವರ ಗಮನವನ್ನು ಬೇರೆಡೆ ಸೆಳೆದು ಏಕಾಏಕಿ ಕತ್ತಿಗೆ ಕೈ ಹಾಕಿ ಮಾಂಗಲ್ಯ ಸರವನ್ನು ಕಿತ್ತುಕೊಂಡು ಓಡಿಹೋಗಿದ್ದಾನೆ. ಸಿಸಿಟಿವಿ ಕ್ಯಾಮರಾದಲ್ಲಿ ಘಟನೆ ಸಂಪೂರ್ಣವಾಗಿ ಸೆರೆಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
