ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ: ಕಾರಣ ಇಲ್ಲಿದೆ

Edited By:

Updated on: May 18, 2026 | 2:07 PM

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಪದಾಧಿಕಾರಿಗಳ ಪದಚ್ಯುತಿ ವಿಚಾರವಾಗಿ ಉಂಟಾದ ಗಲಾಟೆಯು, ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಹಾಗೂ ಅಧ್ಯಕ್ಷ ಮಂಜುನಾಥ್ ಗೌಡ ಅವರ ಬೆಂಬಲಿಗರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.

ಬೆಂಗಳೂರು, ಮೇ 18: ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವೆಯೇ ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ನಿನ್ನೆ ಹಲವು ಮಂದಿ ಪದಾಧಿಕಾರಿಗಳನ್ನು ಸ್ಥಾನದಿಂದ ಕಿತ್ತು ಹಾಕಿತ್ತು. ಇಂದು ಅದೇ ವಿಚಾರಕ್ಕೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ನಡುವೆ ಗಲಾಟೆ ನಡೆದಿದ್ದು, ಅದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. NEET ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಪ್ರತಿಭಟನೆ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಮತ್ತು ಅಧ್ಯಕ್ಷ ಮಂಜುನಾಥ್ ಗೌಡ ಬೆಂಬಲಿಗರು ಪರಸ್ಪರ ಬಡಿದಾಡಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 18, 2026 01:57 PM
Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More