Bengaluru Blast: ಚಿನ್ನಯ್ಯನಪಾಳ್ಯದಲ್ಲಿ ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಬೆಂಗಳೂರಿನ ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನಪಾಳ್ಯದಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಿಂದಾಗಿ 8 ಮನೆಗಳು ಹಾನಿಗೊಳಗಾಗಿವೆ. ಬೆಳಿಗ್ಗೆ ಸುಮಾರು 7-8 ಗಂಟೆಯ ಸಮಯದಲ್ಲಿ ಭಾರಿ ಶಬ್ದ ಕೇಳಿಸಿದೆ. ಕಟ್ಟಡಗಳ ಗೋಡೆಗಳು ಕುಸಿದು ಬಿದ್ದಿವೆ ಮತ್ತು ಮನೆಗಳಿಗೆ ಹಾನಿಯಾಗಿದೆ. ಪ್ರತ್ಯಕ್ಷದರ್ಶಿಗಳು ಜೋರಾದ ಶಬ್ದ ಮತ್ತು ಕಟ್ಟಡಗಳಿಗೆ ಹಾನಿಯಾಗಿರುವುದು ಕಂಡು ರಕ್ಷಣೆಗೆ ಧಾವಿಸಿದ್ದಾಗಿ ತಿಳಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಯ ವಿಡಿಯೋ ಇಲ್ಲಿದೆ.
ಬೆಂಗಳೂರು, ಆಗಸ್ಟ್ 15: ಬೆಂಗಳೂರಿನ ಚಿನ್ನಯ್ಯನಪಾಳ್ಯದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಿಂದ ಸುಮಾರು 8 ಮನೆಗಳಿಗೆ ಹಾನಿಯಾಗಿದೆ. ಅನೇಕರು ಗಾಯಗೊಂಡಿದ್ದಾರೆ. ಈ ವಿಚಾರವಾಗಿ ಸ್ಥಳೀಯರು, ಪ್ರತ್ಯಕ್ಷದರ್ಶಿಗಳು ಮಾತನಾಡಿದ್ದು, ಸಿಲಿಂಡರ್ ಸ್ಫೋಟ ಎಂಬುದರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಭಯಾನಕ ಸದ್ದು ಕೇಳಿಸಿತ್ತು. ಜೋರಾದ ಸದ್ದು ಕೇಳಿ ಓಡಿಹೋಗಿ ನೋಡಿದೆವು. ತಕ್ಷಣ ಅಲ್ಲಿದ್ದವರ ನೆರವಿಗೆ ಧಾವಿಸಿದೆವು ಎಂದು ಸ್ಥಳೀಯರು ಹೇಳಿದ್ದಾರೆ. ಸಿಲಿಂಡರ್ ಸ್ಫೋಟ ಸಂಭವಿಸಿರಬಹುದು ಎಂದು ಮೇಲ್ನೋಟಕ್ಕೆ ಅನಿಸುತ್ತಿದೆ ಎಂದು ಆಡುಗೋಡಿ ಠಾಣೆ ಪೊಲೀಸರು ತಿಳಿಸಿದ್ದಾರೆ. ಆದರೆ ಸ್ಫೋಟದ ಸದ್ದು, ತೀವ್ರತೆಯಿಂದ ಅನುಮಾನಗಳು ಹೆಚ್ಚಾಗಿವೆ.
Latest Videos
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

