ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಬೆಂಗಳೂರಿನ ಚಿನ್ನಯ್ಯನ ಪಾಳ್ಯದಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ಒಂದು ಬಾಲಕ ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. 8ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟದ ಕಾರಣ ಇನ್ನೂ ನಿಗೂಢವಾಗಿದೆ.
ಬೆಂಗಳೂರು, ಆಗಸ್ಟ್ 15: ಬೆಂಗಳೂರಿನ ವಿಲ್ಸನ್ ಗಾರ್ಡನ್ ಪ್ರದೇಶದ ಚಿನ್ನಯ್ಯನ ಪಾಳ್ಯದಲ್ಲಿ ಸಂಭವಿಸಿದ್ದ ನಿಗೂಢ ಸ್ಫೋಟದಲ್ಲಿ ಬಾಲಕ ಮೃತಪಟ್ಟು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುಮಾರು 8 ಮನೆಗಳಿಗೆ ಹಾನಿಯಾಗಿವೆ. ನಿಗೂಢ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Published on: Aug 15, 2025 09:33 PM
Latest Videos

