ATM ವಾಹನದಲ್ಲಿದ್ದ 7 ಕೋಟಿ ರೂ, ದರೋಡೆ ಬಗ್ಗೆ ಕಮಿಷನರ್ ಹೇಳಿದ್ದಿಷ್ಟು
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಬಹುದೊಡ್ಡ ದರೋಡೆ ಪ್ರಕರಣ ನಡೆದಿದೆ. ಸಿಎಂಎಸ್ ಕಂಪನಿಯ ವ್ಯಾನ್ ಅಡ್ಡಗಟ್ಟಿ ಸುಮಾರು 7 ಕೋಟಿ 11 ಲಕ್ಷ ರೂಪಾಯಿ ಹಣ ದೋಚಿಕೊಂಡು ಪರಾರಿಯಾಗಿದ್ದಾರೆ. ಅಶೋಕ್ ಪಿಲ್ಲರ್ ಬಳಿ ಹಣ ಇದ್ದ ಸಿಎಂಎಸ್ ವಾಹನವನ್ನು ಹೈಜಾಕ್ ಮಾಡಿದ್ದು, ಬಳಿಕ ಹಣವಿದ್ದ ವಾಹನವನ್ನು ಜಯದೇವ ಡೈರಿ ಸರ್ಕಲ್ ಫ್ಲೈಓವರ್ ಬಳಿ ನಿಲ್ಲಿಸಿದ್ದಾರೆ. ನಂತರ ದರೋಡೆಕೋರರು ಹಣವನ್ನು ತಮ್ಮ ಇನ್ನೋವಾ ಕಾರಿನಲ್ಲಿ ತುಂಬಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸರು ಹೈಅಲರ್ಟ್ ಆಗಿದ್ದು, ನಗರದೆಲ್ಲೆಡೆ ತಪಾಸಣೆ ನಡೆಸಿದ್ದಾರೆ. ಇನ್ನು ಘಟನೆ ಸಂಬಂಧ ಮಾಹಿತಿ ಪಡೆಯಲು ಬೆಂಗಳೂರು ನಗರ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸಿದ್ದಾಪುರ ಠಾಣೆಗೆ ಭೇಟಿ ನೀಡಿದ್ದು, ದರೋಡೆ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇನ್ನು ಘಟನೆ ಬಗ್ಗೆ ಏನೆಲ್ಲಾ ಹೇಳಿದ್ದಾರೆ ಕೇಳಿ.
ಬೆಂಗಳೂರು, (ನವೆಂಬರ್ 19): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಬಹುದೊಡ್ಡ ದರೋಡೆ ಪ್ರಕರಣ ನಡೆದಿದೆ. ಸಿಎಂಎಸ್ ಕಂಪನಿಯ ವ್ಯಾನ್ ಅಡ್ಡಗಟ್ಟಿ ಸುಮಾರು 7 ಕೋಟಿ 11 ಲಕ್ಷ ರೂಪಾಯಿ ಹಣ ದೋಚಿಕೊಂಡು ಪರಾರಿಯಾಗಿದ್ದಾರೆ. ಅಶೋಕ್ ಪಿಲ್ಲರ್ ಬಳಿ ಹಣ ಇದ್ದ ಸಿಎಂಎಸ್ ವಾಹನವನ್ನು ಹೈಜಾಕ್ ಮಾಡಿದ್ದು, ಬಳಿಕ ಹಣವಿದ್ದ ವಾಹನವನ್ನು ಜಯದೇವ ಡೈರಿ ಸರ್ಕಲ್ ಫ್ಲೈಓವರ್ ಬಳಿ ನಿಲ್ಲಿಸಿದ್ದಾರೆ. ನಂತರ ದರೋಡೆಕೋರರು ಹಣವನ್ನು ತಮ್ಮ ಇನ್ನೋವಾ ಕಾರಿನಲ್ಲಿ ತುಂಬಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸರು ಹೈಅಲರ್ಟ್ ಆಗಿದ್ದು, ನಗರದೆಲ್ಲೆಡೆ ತಪಾಸಣೆ ನಡೆಸಿದ್ದಾರೆ. ಇನ್ನು ಘಟನೆ ಸಂಬಂಧ ಮಾಹಿತಿ ಪಡೆಯಲು ಬೆಂಗಳೂರು ನಗರ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸಿದ್ದಾಪುರ ಠಾಣೆಗೆ ಭೇಟಿ ನೀಡಿದ್ದು, ದರೋಡೆ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇನ್ನು ಘಟನೆ ಬಗ್ಗೆ ಏನೆಲ್ಲಾ ಹೇಳಿದ್ದಾರೆ ಕೇಳಿ.
Published on: Nov 19, 2025 05:40 PM
