AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cylinder Price Hike: 1700 ರೂ. ಬೆಲೆಯ ಸಿಲಿಂಡರ್ 5000 ರೂ.ಗೆ ಮಾರಾಟ!

Cylinder Price Hike: 1700 ರೂ. ಬೆಲೆಯ ಸಿಲಿಂಡರ್ 5000 ರೂ.ಗೆ ಮಾರಾಟ!

ವಿನಯ್​ ಕಾಶಪ್ಪನವರ್​
| Edited By: |

Updated on: Mar 14, 2026 | 9:58 AM

Share

ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವ ಸೃಷ್ಟಿಯಾಗಿದೆ. ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜಧಾನಿಯ ಹೋಟೆಲ್‌ಗಳಿಗೂ ತಟ್ಟಿದೆ. ಸಿಲಿಂಡರ್‌ಗಳ ಕೊರತೆಯಿಂದ ಕಾಳ ಸಂತೆಯಲ್ಲಿ 1,700 ರೂ. ಬೆಲೆಯ ಕಮರ್ಷಿಯಲ್ ಸಿಲಿಂಡರ್‌ಗಳು 5,000ದಿಂದ 5,500 ರೂ.ಗೆ ಮಾರಾಟವಾಗುತ್ತಿವೆ. ಡಿಸ್ಟ್ರಿಬ್ಯೂಟರ್‌ಗಳು ಮತ್ತು ಕೆಲ ಏಜೆನ್ಸಿಗಳು ಈ ಪರಿಸ್ಥಿತಿಯ ಲಾಭ ಪಡೆದು ಹೋಟೆಲ್ ಮಾಲೀಕರನ್ನು ಸುಲಿಗೆ ಮಾಡುತ್ತಿವೆ ಎನ್ನಲಾಗುತ್ತಿದೆ.

ಬೆಂಗಳೂರು, ಮಾರ್ಚ್​ 14: ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವ ಸೃಷ್ಟಿಯಾಗಿದೆ. ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜಧಾನಿಯ ಹೋಟೆಲ್‌ಗಳಿಗೂ ತಟ್ಟಿದೆ. ಸಿಲಿಂಡರ್‌ಗಳ ಕೊರತೆಯಿಂದ ಕಾಳ ಸಂತೆಯಲ್ಲಿ 1,700 ರೂ. ಬೆಲೆಯ ಕಮರ್ಷಿಯಲ್ ಸಿಲಿಂಡರ್‌ಗಳು 5,000 ದಿಂದ 5,500 ರೂ.ಗೆ ಮಾರಾಟವಾಗುತ್ತಿವೆ. ಡಿಸ್ಟ್ರಿಬ್ಯೂಟರ್‌ಗಳು ಮತ್ತು ಕೆಲ ಏಜೆನ್ಸಿಗಳು ಈ ಪರಿಸ್ಥಿತಿಯ ಲಾಭ ಪಡೆದು ಹೋಟೆಲ್ ಮಾಲೀಕರನ್ನು ಸುಲಿಗೆ ಮಾಡುತ್ತಿವೆ ಎನ್ನಲಾಗುತ್ತಿದೆ.

ಈ ಸಂಕಷ್ಟದಿಂದ ಹೋಟೆಲ್ ಮಾಲೀಕರು ತಮ್ಮ ಸಿಬ್ಬಂದಿಯನ್ನು ಉಳಿಸಿಕೊಳ್ಳಲು ಮತ್ತು ಗ್ರಾಹಕರಿಗೆ ಸೇವೆ ಒದಗಿಸಲು ಅನಿವಾರ್ಯವಾಗಿ ಸಿಲಿಂಡರ್‌ಗಳನ್ನು ದುಬಾರಿ ಬೆಲೆಗೆ ಖರೀದಿಸುತ್ತಿದ್ದಾರೆ. ಇದರ ಪರಿಣಾಮವಾಗಿ, ಹೋಟೆಲ್ ಮೆನುಗಳಲ್ಲಿನ ತಿಂಡಿಗಳ ದರ ಏರಿಕೆಯಾಗಿದೆ. ಈ ಅಕ್ರಮ ಮಾರಾಟದ ಮೇಲೆ ಕಡಿವಾಣ ಹಾಕಲು ಮತ್ತು ಹೋಟೆಲ್‌ಗಳಿಗೆ ಸಮಾನವಾಗಿ ಸಿಲಿಂಡರ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More