AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಗಿರಿನಗರದಲ್ಲಿ ಕಾಂಪೌಂಡ್ ಗೋಡೆ ಕುಸಿತ: ಅದೃಷ್ಟವಶಾತ್ ತಪ್ಪಿದ ದೊಡ್ಡ ದುರಂತ

ಮಳೆಗೆ ಗಿರಿನಗರದಲ್ಲಿ ಕಾಂಪೌಂಡ್ ಗೋಡೆ ಕುಸಿತ: ಅದೃಷ್ಟವಶಾತ್ ತಪ್ಪಿದ ದೊಡ್ಡ ದುರಂತ

ವಿಕಾಸ್​ ಬಿಎಂ
| Edited By: |

Updated on: Sep 24, 2026 | 9:13 AM

Share

ಬೆಂಗಳೂರಿನ ಗಿರಿನಗರದಲ್ಲಿ ಭಾರೀ ಮಳೆಯಿಂದಾಗಿ ಅಕ್ರಮವಾಗಿ ನಿರ್ಮಿಸಿದ್ದ ಕಾಂಪೌಂಡ್ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪಾರಾಗಿದ್ದಾರೆ. ಘಟನೆಯಲ್ಲಿ ಗಂಗಮ್ಮ ಎಂಬುವವರ ಮನೆ ಜಖಂಗೊಂಡಿದ್ದು, ಪಕ್ಕದ ಮನೆಯಲ್ಲಿದ್ದ ಮಗುವಿಗೆ ಸಣ್ಣ ಗಾಯಗಳಾಗಿವೆ. ಸ್ಥಳೀಯರು ಈ ಹಿಂದೆ ಗೋಡೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದರೂ, ಅನಂತ್ ಪಟೇಲ್ ಎಂಬುವವರು ಅಕ್ರಮವಾಗಿ ನಿರ್ಮಿಸಿದ್ದು, ಸಂಬಂಧಪಟ್ಟವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 24: ಇತ್ತೀಚೆಗೆ ಸುರಿದ ಮಳೆಯಿಂದಾಗಿ ಗಿರಿನಗರದ ಈರಣ್ಣಯ್ಯನ ಗುಡ್ಡದ ಪ್ರದೇಶದಲ್ಲಿ ನಿರ್ಮಿಸಿದ್ದ ಕಾಂಪೌಂಡ್ ಗೋಡೆಯೊಂದು ಕುಸಿದಿದೆ.  ಗಂಗಮ್ಮ ಎಂಬುವವರಿಗೆ ಸೇರಿದ ಮನೆಯ ಮೇಲೆ ಮಣ್ಣು ಮತ್ತು ಕಾಂಪೌಂಡ್ ಅವಶೇಷಗಳು ಬಿದ್ದಿದ್ದು, ಅದೃಷ್ಟವಶಾತ್ ಘಟನೆ ಸಂಭವಿಸಿದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಪಕ್ಕದ ಮನೆಯಲ್ಲಿದ್ದ ಚಿಕ್ಕ ಮಗುವೊಂದಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ. ಅನಂತ್ ಪಟೇಲ್ ಎಂಬುವವರು ಸುಮಾರು ಎರಡು ತಿಂಗಳ ಹಿಂದೆ, ಸ್ಥಳೀಯರ ವಿರೋಧದ ನಡುವೆಯೂ, ತಮ್ಮ ಜಾಗದಲ್ಲಿ 10 ಅಡಿಗೂ ಹೆಚ್ಚು ಮಣ್ಣು ತುಂಬಿಸಿ ಕಲ್ಲಿನ ಕಾಂಪೌಂಡ್ ನಿರ್ಮಿಸಿದ್ದರು. ಈ ನಿರ್ಮಾಣ ಅಪಾಯಕಾರಿ ಎಂದು ಸ್ಥಳೀಯರು ಮೊದಲೇ ಎಚ್ಚರಿಕೆ ನೀಡಿದ್ದರೂ, ಅದನ್ನು ಕಡೆಗಣಿಸಲಾಗಿತ್ತು. ಮಳೆ ಬಂದ ಕಾರಣ ಮಣ್ಣು ಸಡಿಲಗೊಂಡು ಗೋಡೆ ಕುಸಿದಿದೆ. ಘಟನೆಯ ಬಳಿಕ ಅಗ್ನಿಶಾಮಕ ಸಿಬ್ಬಂದಿ ಮತ್ತು ಗಿರಿನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ವಿಕಾಸ್​ ಬಿಎಂ
ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More