ಮಳೆಗೆ ಗಿರಿನಗರದಲ್ಲಿ ಕಾಂಪೌಂಡ್ ಗೋಡೆ ಕುಸಿತ: ಅದೃಷ್ಟವಶಾತ್ ತಪ್ಪಿದ ದೊಡ್ಡ ದುರಂತ
ಬೆಂಗಳೂರಿನ ಗಿರಿನಗರದಲ್ಲಿ ಭಾರೀ ಮಳೆಯಿಂದಾಗಿ ಅಕ್ರಮವಾಗಿ ನಿರ್ಮಿಸಿದ್ದ ಕಾಂಪೌಂಡ್ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪಾರಾಗಿದ್ದಾರೆ. ಘಟನೆಯಲ್ಲಿ ಗಂಗಮ್ಮ ಎಂಬುವವರ ಮನೆ ಜಖಂಗೊಂಡಿದ್ದು, ಪಕ್ಕದ ಮನೆಯಲ್ಲಿದ್ದ ಮಗುವಿಗೆ ಸಣ್ಣ ಗಾಯಗಳಾಗಿವೆ. ಸ್ಥಳೀಯರು ಈ ಹಿಂದೆ ಗೋಡೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದರೂ, ಅನಂತ್ ಪಟೇಲ್ ಎಂಬುವವರು ಅಕ್ರಮವಾಗಿ ನಿರ್ಮಿಸಿದ್ದು, ಸಂಬಂಧಪಟ್ಟವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 24: ಇತ್ತೀಚೆಗೆ ಸುರಿದ ಮಳೆಯಿಂದಾಗಿ ಗಿರಿನಗರದ ಈರಣ್ಣಯ್ಯನ ಗುಡ್ಡದ ಪ್ರದೇಶದಲ್ಲಿ ನಿರ್ಮಿಸಿದ್ದ ಕಾಂಪೌಂಡ್ ಗೋಡೆಯೊಂದು ಕುಸಿದಿದೆ. ಗಂಗಮ್ಮ ಎಂಬುವವರಿಗೆ ಸೇರಿದ ಮನೆಯ ಮೇಲೆ ಮಣ್ಣು ಮತ್ತು ಕಾಂಪೌಂಡ್ ಅವಶೇಷಗಳು ಬಿದ್ದಿದ್ದು, ಅದೃಷ್ಟವಶಾತ್ ಘಟನೆ ಸಂಭವಿಸಿದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಪಕ್ಕದ ಮನೆಯಲ್ಲಿದ್ದ ಚಿಕ್ಕ ಮಗುವೊಂದಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ. ಅನಂತ್ ಪಟೇಲ್ ಎಂಬುವವರು ಸುಮಾರು ಎರಡು ತಿಂಗಳ ಹಿಂದೆ, ಸ್ಥಳೀಯರ ವಿರೋಧದ ನಡುವೆಯೂ, ತಮ್ಮ ಜಾಗದಲ್ಲಿ 10 ಅಡಿಗೂ ಹೆಚ್ಚು ಮಣ್ಣು ತುಂಬಿಸಿ ಕಲ್ಲಿನ ಕಾಂಪೌಂಡ್ ನಿರ್ಮಿಸಿದ್ದರು. ಈ ನಿರ್ಮಾಣ ಅಪಾಯಕಾರಿ ಎಂದು ಸ್ಥಳೀಯರು ಮೊದಲೇ ಎಚ್ಚರಿಕೆ ನೀಡಿದ್ದರೂ, ಅದನ್ನು ಕಡೆಗಣಿಸಲಾಗಿತ್ತು. ಮಳೆ ಬಂದ ಕಾರಣ ಮಣ್ಣು ಸಡಿಲಗೊಂಡು ಗೋಡೆ ಕುಸಿದಿದೆ. ಘಟನೆಯ ಬಳಿಕ ಅಗ್ನಿಶಾಮಕ ಸಿಬ್ಬಂದಿ ಮತ್ತು ಗಿರಿನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
