AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು, ದಂಪತಿ ಜಸ್ಟ್ ಮಿಸ್: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯ್ತು ದೃಶ್ಯ

ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು, ದಂಪತಿ ಜಸ್ಟ್ ಮಿಸ್: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯ್ತು ದೃಶ್ಯ

ಶಿವಪ್ರಸಾದ್​ ಬಿ.
| Edited By: |

Updated on: Oct 09, 2026 | 12:13 PM

Share

ಬೆಂಗಳೂರಿನ ಕಾಕ್ಸ್ ಟೌನ್‌ನಲ್ಲಿ ಗುರುವಾರ ರಾತ್ರಿ ಏಕಾಏಕಿ ಬೃಹತ್ ಮರ ಬಿದ್ದಿದೆ. ಹೊಯ್ಸಳ ಪೊಲೀಸ್ ವಾಹನದ ಮೇಲೆ ಮರ ಬೀಳುವ ಸಾಧ್ಯತೆ ಇದ್ದು, ಗಮನಿಸಿದ ಪೊಲೀಸರು ವಾಹನವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ. ಕಾರಿನಲ್ಲಿ ಸಾಗುತ್ತಿದ್ದ ದಂಪತಿಯೂ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಘಟನೆಯ ದೃಶ್ಯ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ.

ಬೆಂಗಳೂರು, ಅಕ್ಟೋಬರ್ 9: ಬೆಂಗಳೂರಿನ ಕಾಕ್ಸ್ ಟೌನ್‌ನಲ್ಲಿ ಗುರುವಾರ ರಾತ್ರಿ ಬೃಹತ್ ಮರವೊಂದು ರಸ್ತೆ ಮೇಲೆ ಉರುಳಿಬಿದ್ದಿದ್ದು, ಅದೃಷ್ಟವಶಾತ್ ಹೊಯ್ಸಳ ಪೊಲೀಸ್ ವಾಹನ ಹಾಗೂ ದಂಪತಿ ಇದ್ದ ಕಾರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದೆ. ಹೊಯ್ಸಳ ವಾಹನದ ಮೇಲೆ ಮರ ಬೀಳುವ ಮುನ್ಸೂಚನೆ ಸಿಗುತ್ತಿದ್ದಂತೆ ಪೊಲೀಸರು ವಾಹನವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ. ಇದೇ ವೇಳೆ, ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ದಂಪತಿಯೂ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಘಟನೆಯ ದೃಶ್ಯ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More