ಮದುವೆ ಆಗುತ್ತೇನೆ ಎಂದು ಗರ್ಭಿಣಿ ಮಾಡಿ ಓಡಿಹೋದ: ಕ್ರಿಕೆಟ್ ಕೋಚ್​​​ನ ಪಲ್ಲಂಗದಾಟ ಬಿಚ್ಚಿಟ್ಟ ಸಂತ್ರಸ್ತೆ

Updated By: ರಮೇಶ್ ಬಿ. ಜವಳಗೇರಾ

Updated on: Sep 25, 2025 | 7:21 PM

ಬೆಂಗಳೂರಿನ ಕ್ರಿಕೆಟ್ ಕೋಚ್ ಮ್ಯಾಥ್ಯೂ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಇದೀಗ ಗಭೀರ ಸ್ವರೂಪ ಪಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಸಂತ್ರಸ್ತೆ ಗರ್ಭಿಣಿಯಾಗಿದ್ದು, ಆರೋಪಿಯು ತನ್ನ ಫೋನ್ ಸ್ವಿಚ್ ಆಫ್ ಮಾಡಿ ತಪ್ಪಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬೆಂಗಳೂರು, ಸೆಪ್ಟೆಂಬರ್ 25: ಬೆಂಗಳೂರಿನಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಕ್ರಿಕೆಟ್ ಕೋಚ್ ಲೈಂಗಿಕ ದೌರ್ಜನ್ಯ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಕೆಲವು ಮಹಿಳೆಯರು ಮತ್ತು ಯುವತಿಯರ ಜೊತೆಗಿರುವ ಖಾಸಗಿ ಕ್ಷಣವನ್ನು ಸೆರೆ ಹಿಡಿದು ಸುಮಾರು 200 ವಿಡಿಯೋ ಮಾಡಿ ಇಟ್ಟುಕೊಂಡಿರುವ ಆರೋಪ ಎದುರಿಸುತ್ತಿರುವ ಕ್ರಿಕೆಟ್ ಕೋಚ್ ಮ್ಯಾಥ್ಯೂ ಎಂಬಾತನ ವಿರುದ್ಧ ಇದೀಗ ಮತ್ತೊಂದು ಆರೋಪ ಕೇಳಿಬಂದಿದೆ. ಆತ ಮಹಿಳೆಯೊಬ್ಬರನ್ನು ಗರ್ಭಿಣಿ ಮಾಡಿ ಕೈಬಿಟ್ಟಿದ್ದಾನೆ ಎನ್ನಲಾಗಿದೆ. ಸಂತ್ರಸ್ತೆಯು ತಮ್ಮ ಮೇಲೆ ನಡೆದ ದೌರ್ಜನ್ಯವನ್ನು ವಿವರಿಸಿ, ಕೋಣನಕುಂಟೆ ಪೊಲೀಸರು ಆರಂಭದಲ್ಲಿ ದೂರು ಸ್ವೀಕರಿಸಿರಲಿಲ್ಲ. ನಂತರ ಮಹಿಳಾ ಆಯೋಗಕ್ಕೆ ದೂರು ನೀಡಿದ ಬಳಿಕ, ಅವರ ಸೂಚನೆ ಮೇರೆಗೆ ಪೊಲೀಸರು ದೂರು ಸ್ವೀಕರಿಸಿದರು. ಆದರೆ, ಗರ್ಭಿಣಿ ಮಾಡಿರುವ ವಿಚಾರ ಕೈಬಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಆಕೆ ನೀಡಿರುವ ದೂರಿನ ಪ್ರಕಾರ, ಮ್ಯಾಥ್ಯೂ ಆಕೆ ಜತೆ ಲೈಂಗಿಕ ಕ್ರಿಯೆ ನಡೆಸಿದ್ದರ ಜತೆಗೆ ವಿಡಿಯೋ ರೆಕಾರ್ಡ್ ಸಹ ಮಾಡಿಟ್ಟುಕೊಂಡಿದ್ದ ಎನ್ನಲಾಗಿದೆ. ವೀಡಿಯೋಗಳು ಸೋರಿಕೆಯಾಗಿರುವುದರಿಂದ ತೀವ್ರ ಮಾನಸಿಕ ನೋವು ಅನುಭವಿಸುತ್ತಿರುವುದಾಗಿ ಸಂತ್ರಸ್ತೆ ಹೇಳಿಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 25, 2025 03:04 PM