AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೈಕ್‌ನಲ್ಲೇ ಕೀ ಬಿಟ್ಟು ಹೋದ ಮಾಲೀಕ, ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!

ಬೆಂಗಳೂರು: ಬೈಕ್‌ನಲ್ಲೇ ಕೀ ಬಿಟ್ಟು ಹೋದ ಮಾಲೀಕ, ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!

ಪ್ರದೀಪ್​ ಚಿಕ್ಕಾಟಿ
| Edited By: |

Updated on: Apr 10, 2026 | 9:12 AM

Share

Bike Stolen in Broad Daylight Bangalore: ಬೆಂಗಳೂರಿನ ಲಕ್ಕಸಂದ್ರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಸುಜುಕಿ ಆಕ್ಸೆಸ್ ಬೈಕ್ ಕಳ್ಳತನವಾಗಿದೆ. ಮಾಲೀಕರು ಬೈಕ್‌ನಲ್ಲೇ ಕೀ ಬಿಟ್ಟು ಹೋಗಿದ್ದರಿಂದ ಕಳ್ಳ ಸುಲಭವಾಗಿ ಗಾಡಿ ಕದ್ದು ಪರಾರಿಯಾಗಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಏಪ್ರಿಲ್ 10: ಮನೆ ಮುಂಭಾಗ ನಿಲ್ಲಿಸಿದ್ದ ಬೈಕನ್ನು ಕಳ್ಳನೊಬ್ಬ ಹಾಡಹಗಲೇ ಹೊತ್ತೊಯ್ದಿರುವ ಘಟನೆ ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆದಿದೆ. ಮಾಲೀಕರು ಮಾಡಿದ ಒಂದು ಸಣ್ಣ ನಿರ್ಲಕ್ಷ್ಯ ಕಳ್ಳನಿಗೆ ವರದಾನವಾಗಿ ಪರಿಣಮಿಸಿದ್ದು, ಬೈಕ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಲಕ್ಕಸಂದ್ರದ 16ನೇ ಕ್ರಾಸ್ ಬಳಿ ಏಪ್ರಿಲ್ 9 ರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಿವಾಸಿಯೊಬ್ಬರು ಸುಜುಕಿ ಆಕ್ಸೆಸ್ 125 ಬೈಕ್ ಅನ್ನು ಮನೆ ಮುಂದೆ ನಿಲ್ಲಿಸಿದ್ದರು. ಆದರೆ, ಮರೆತು ಬೈಕ್‌ನಲ್ಲಿಯೇ ಕೀ ಬಿಟ್ಟು ಹೋಗಿದ್ದರು. ಇದನ್ನು ಗಮನಿಸಿದ ಕಳ್ಳ, ಯಾರೂ ಇಲ್ಲದ ಸಮಯ ನೋಡಿ ನಿರಾಯಾಸವಾಗಿ ಬೈಕ್ ಸ್ಟಾರ್ಟ್ ಮಾಡಿ ಪರಾರಿಯಾಗಿದ್ದಾನೆ.

ಬೈಕ್ ಕಳುವಾಗಿರುವುದನ್ನು ಕಂಡು ಆತಂಕಕ್ಕೊಳಗಾದ ಮಾಲೀಕರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕಳ್ಳತನ ಬೆಳಕಿಗೆ ಬಂದಿದೆ. ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಕಳ್ಳನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us