ಹೆಲ್ಮೆಟ್ ಧರಿಸಿ ಬಂದು ಗ್ಯಾಸ್ ಸಿಲಿಂಡರ್ ಎಗರಿಸಿದ ಚಾಲಾಕಿ ಕಳ್ಳ; ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ

Edited By:

Updated on: Apr 07, 2026 | 9:59 AM

ಬೆಂಗಳೂರಿನ ಕಾಡುಗೋಡಿಯಲ್ಲಿ ಹೆಲ್ಮೆಟ್ ಧರಿಸಿ ಬೈಕ್‌ನಲ್ಲಿ ಬಂದ ಕಳ್ಳನೊಬ್ಬ, ಮನೆಯ ಗೇಟ್ ತೆಗೆದು ಅಡುಗೆ ಅನಿಲ ಸಿಲಿಂಡರ್ ಕದ್ದು ಪರಾರಿಯಾಗಿದ್ದಾನೆ. ಸೋಮವಾರ ಮುಂಜಾನೆ ನಡೆದ ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾದ ವಿಡಿಯೋ ಇಲ್ಲಿದೆ.

ಬೆಂಗಳೂರು, ಏಪ್ರಿಲ್ 7: ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗಿನ ಜಾವ ವಿಚಿತ್ರ ಕಳವು ಪ್ರಕರಣ ನಡೆದಿದೆ. ಹೆಲ್ಮೆಟ್ ಧರಿಸಿ ಬೈಕ್‌ನಲ್ಲಿ ಬಂದ ಕಳ್ಳನೊಬ್ಬ, ರಸ್ತೆಯಲ್ಲಿನ ಮನೆಗಳ ಗೇಟ್ ಪರಿಶೀಲಿಸಿ, ಲಾಕ್ ಇಲ್ಲದ ಮನೆಯೊಳಗೆ ನುಗ್ಗಿ ಅಡುಗೆ ಅನಿಲ ಸಿಲಿಂಡರ್ ಕದ್ದು ಪರಾರಿಯಾಗಿದ್ದಾನೆ. ಮುಂಜಾನೆ 3 ಗಂಟೆ ಸುಮಾರಿಗೆ ನಡೆದ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಾಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More