ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕರಿಹೋಬನಹಳ್ಳಿಯಲ್ಲಿ ಪುಡಿ ರೌಡಿಗಳ ಹಾವಳಿ ಮಿತಿಮೀರಿದ್ದು, ಸ್ಥಳೀಯರು ಭೀತಿಯಲ್ಲಿ ದಿನ ದೂಡುವಂತಾಗಿದೆ. ಗಣಿ ಮತ್ತು ನಂಜುಂಡ ಎಂಬ ಪುಂಡರು ಗಾಂಜಾ ಹಾಗೂ ಡ್ರಗ್ಸ್ ಸೇವಿಸಿ ಏರಿಯಾದಲ್ಲಿ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಕಳೆದ 3ನೇ ತಾರೀಖಿನಂದು ರಾತ್ರಿ ಸ್ಥಳೀಯರು ಇವರ ಪುಂಡಾಟವನ್ನು ಪ್ರಶ್ನಿಸಿದ್ದಕ್ಕೆ, ಆಕ್ರೋಶಗೊಂಡ ಆರೋಪಿಗಳು ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಗ್ಲಾಸ್ ಒಡೆದು ದಾಂಧಲೆ ನಡೆಸಿದ್ದಾರೆ.
ಬೆಂಗಳೂರು, ಆಗಸ್ಟ್ 04: ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕರಿಹೋಬನಹಳ್ಳಿಯಲ್ಲಿ ಪುಡಿ ರೌಡಿಗಳ ಹಾವಳಿ ಮಿತಿಮೀರಿದ್ದು, ಸ್ಥಳೀಯರು ಭೀತಿಯಲ್ಲಿ ದಿನ ದೂಡುವಂತಾಗಿದೆ. ಗಣಿ ಮತ್ತು ನಂಜುಂಡ ಎಂಬ ಪುಂಡರು ಗಾಂಜಾ ಹಾಗೂ ಡ್ರಗ್ಸ್ ಸೇವಿಸಿ ಏರಿಯಾದಲ್ಲಿ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ.
ಕಳೆದ 3ನೇ ತಾರೀಖಿನಂದು ರಾತ್ರಿ ಸ್ಥಳೀಯರು ಇವರ ಪುಂಡಾಟವನ್ನು ಪ್ರಶ್ನಿಸಿದ್ದಕ್ಕೆ, ಆಕ್ರೋಶಗೊಂಡ ಆರೋಪಿಗಳು ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಗ್ಲಾಸ್ ಒಡೆದು ದಾಂಧಲೆ ನಡೆಸಿದ್ದಾರೆ. ಈ ಕೃತ್ಯದ ವಿಡಿಯೋ ಹಾಗೂ ವ್ಹೀಲಿಂಗ್ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಆರೋಪಿಗಳ ಹಾವಳಿಗೆ ಬೇಸತ್ತು ಸಂತ್ರಸ್ತರು ಪೀಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ, ಸೂಕ್ತ ಸಾಕ್ಷ್ಯಗಳಿದ್ದರೂ ಪೊಲೀಸರು ಎಫ್‌ಐಆರ್ (FIR) ದಾಖಲಿಸದೇ ಕೇವಲ ಎನ್‌ಸಿಆರ್ (NCR) ಮಾಡಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Aug 04, 2026 07:57 AM
Loading...
Unable to load recommendations.
Follow Us