ರಸ್ತೆ ಬದಿ ಕಾರು ಪಾರ್ಕ್ ಮಾಡಿ ಹೋಗುವಾಗ ಬೆಲೆಬಾಳುವ ವಸ್ತು ಬಿಟ್ಟು ಹೋಗ್ತೀರಾ? ಹಾಗಿದ್ರೆ ಈ ಸಿಸಿಟಿವಿ ವಿಡಿಯೋ ನೋಡಲೇಬೇಕು
ಬೆಂಗಳೂರಿನ ಅಶೋಕನಗರದಲ್ಲಿ ರಸ್ತೆ ಪಕ್ಕ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ಅದರಲ್ಲಿದ್ದ ಟಿವಿ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳರು ದೋಚಿದ್ದಾರೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಬೆಂಗಳೂರಿನ ರಸ್ತೆಗಳಲ್ಲಿ ಕಾರು ಪಾರ್ಕ್ ಮಾಡಿ ಹೋಗುವಾಗ ಬೆಲೆಬಾಳುವ ವಸ್ತುಗಳನ್ನು ಅದರಲ್ಲಿ ಬಿಟ್ಟುಹೋಗುವ ಮುನ್ನ ಈ ಸಿಸಿಟಿವಿ ವಿಡಿಯೋ ಒಮ್ಮೆ ನೋಡಿ.
ಬೆಂಗಳೂರು, ಮೇ 7: ರಾಜಧಾನಿ ಬೆಂಗಳೂರಿನ ರಸ್ತೆ ಪಕ್ಕದಲ್ಲಿ ಕಾರು ಪಾರ್ಕ್ ಮಾಡಿ ಬೆಲೆಬಾಳುವ ವಸ್ತುಗಳನ್ನು ಅದರಲ್ಲಿಯೇ ಬಿಟ್ಟು ಹೋಗುವವರು ಎಚ್ಚೆತ್ತುಕೊಳ್ಳಬೇಕಿದೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ಅದರಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕಳೆದ ತಿಂಗಳು ನಡೆದ ಈ ಘಟನೆಯಲ್ಲಿ, ಕಾರಿನ ಮಾಲೀಕರು ರಾತ್ರಿ ಟಿವಿ ಹಾಗೂ ಕೆಲವು ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಾರಿನಲ್ಲೇ ಇಟ್ಟು ರಸ್ತೆ ಪಕ್ಕದಲ್ಲಿ ಪಾರ್ಕ್ ಮಾಡಿ ಮನೆಗೆ ತೆರಳಿದ್ದರು. ಬೆಳಿಗ್ಗೆ 7 ಗಂಟೆಗೆ ಬಂದು ನೋಡಿದಾಗ ಕಾರಿನ ಗಾಜು ಒಡೆದಿರುವುದು ಹಾಗೂ ಒಳಗಿದ್ದ ವಸ್ತುಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಮತ್ತೊಂದು ಕಾರಿನಲ್ಲಿ ಬಂದ ಕಿಡಿಗೇಡಿಗಳು ಈ ಕೃತ್ಯ ಎಸಗಿರುವುದು ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಅಶೋಕನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಳ್ಳರಿಗಾಗಿ ಶೋಧ ನಡೆಸುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
