ಅಕ್ರಮ ಸಂಬಂಧದ ಗುಟ್ಟು ರಟ್ಟು: ಬೆಂಗಳೂರಿನಲ್ಲಿ ಮಹಿಳೆ ಮೇಲೆ ತಂದೆ-ಮಗನಿಂದ ಹಲ್ಲೆ

Edited By:

Updated on: Apr 18, 2026 | 7:45 AM

ವಯಾಲಿಕಾವಲ್‌ನಲ್ಲಿ ದೇವಿಕಾ ಎಂಬ ಮಹಿಳೆಯ ಮೇಲೆ ಅಕ್ರಮ ಸಂಬಂಧದ ವಿಚಾರವಾಗಿ ಹಲ್ಲೆ ನಡೆದಿದೆ. ತಂದೆ ನಾಗರಾಜ್ ಮತ್ತು ಮಗ ಲೋಕೇಶ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ದೂರು-ಪ್ರತಿದೂರು ದಾಖಲಾಗಿವೆ.

ಬೆಂಗಳೂರು, ಏಪ್ರಿಲ್ 18: ಬೆಂಗಳೂರಿನ ವಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಸಂಬಂಧದ ಬಗ್ಗೆ ಪತ್ನಿಗೆ ತಿಳಿಸಿದ್ದಾರೆ ಎಂಬ ಆರೋಪದ ಮೇಲೆ ಮಹಿಳೆಯೊಬ್ಬರ ಮೇಲೆ ಶುಕ್ರವಾರ ರಾತ್ರಿ ಹಲ್ಲೆ ನಡೆದ ಬಗ್ಗೆ ವರದಿಯಾಗಿದೆ. ನಾಗರಾಜ್ ಎಂಬಾತ ಮತ್ತು ಅವರ ಮಗ ಲೋಕೇಶ್ ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಘಟನೆ ರಾತ್ರಿ 10 ಗಂಟೆ ಸುಮಾರಿಗೆ ಮಹಿಳೆಯ ಮನೆಯ ಬಳಿ ಸಂಭವಿಸಿದೆ. ಆರೋಪಿಗಳಾದ ನಾಗರಾಜ್ ಮತ್ತು ಲೋಕೇಶ್ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಅವರನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ವಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ಎರಡೂ ದಾಖಲಾಗಿವೆ.

ಅಕ್ರಮ ಸಂಬಂಧದ ಬಗ್ಗೆ ನೇರವಾಗಿ ಯಾರಿಗೂ ಹೇಳಿರಲಿಲ್ಲ. ಸಂಬಂಧಪಟ್ಟವರ ಪತ್ನಿ ತಾನೇ ಕೇಳಿದಾಗ, ಅದಕ್ಕೆ ಉತ್ತರ ನೀಡಿದ್ದಾಗಿ ಮಹಿಳೆ ತಿಳಿಸಿದ್ದಾರೆ. ಆನಂತರ ತಂದೆ-ಮಗ ಏಕಾಏಕಿ ಬಂದು ತಮ್ಮ ಮೇಲೆ ಹಲ್ಲೆ ನಡೆಸಿ, ಎಳೆದಾಡಿ, ಕಲ್ಲುಗಳಿಂದ ಹೊಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us