ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಸಿಲಿಂಡರ್ ಸಮಸ್ಯೆ ಈಗಷ್ಟೇ ಸುಧಾರಿಸಿದೆ ಎಂದು ನಿಟ್ಟುಸಿರುವ ಬಿಡುವ ಹೊತ್ತಿನಲ್ಲೇ ನಗರದಲ್ಲಿ ಆಟೋದಲ್ಲಿ ಬಂದು ಕ್ಷಣಾರ್ಧದಲ್ಲಿ ಮನೆಗಳ ಸಿಲಿಂಡರ್ ಕದಿಯುವ ಖತರ್ನಾಕ್ ಗ್ಯಾಂಗ್ ಸಕ್ರಿಯವಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಹಾಗೂ ಲಕ್ಷ್ಮೀಪುರ ವ್ಯಾಪ್ತಿಯಲ್ಲಿ ಹಗಲು-ರಾತ್ರಿ ಎನ್ನದೆ ರಾಜಾರೋಷವಾಗಿ ಮನೆ ಗೇಟ್ ತೆರೆದು ನುಗ್ಗಿ 10ಕ್ಕೂ ಹೆಚ್ಚು ಸಿಲಿಂಡರ್‌ಗಳನ್ನು ಕದ್ದು ಪರಾರಿಯಾಗಿದ್ದಾರೆ. ಆಟೋದಲ್ಲಿ ಬರುವ ಇಬ್ಬರು ಖತರ್ನಾಕ್ ಕಳ್ಳರು ಕ್ಷಣಾರ್ಧದಲ್ಲಿ ಸಿಲಿಂಡರ್ ಎಗರಿಸುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಬೆಂಗಳೂರು, ಆಗಸ್ಟ್ 03: ಸಿಲಿಂಡರ್ ಸಮಸ್ಯೆ ಈಗಷ್ಟೇ ಸುಧಾರಿಸಿದೆ ಎಂದು ನಿಟ್ಟುಸಿರುವ ಬಿಡುವ ಹೊತ್ತಿನಲ್ಲೇ ನಗರದಲ್ಲಿ ಆಟೋದಲ್ಲಿ ಬಂದು ಕ್ಷಣಾರ್ಧದಲ್ಲಿ ಮನೆಗಳ ಸಿಲಿಂಡರ್ ಕದಿಯುವ ಖತರ್ನಾಕ್ ಗ್ಯಾಂಗ್ ಸಕ್ರಿಯವಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಹಾಗೂ ಲಕ್ಷ್ಮೀಪುರ ವ್ಯಾಪ್ತಿಯಲ್ಲಿ ಹಗಲು-ರಾತ್ರಿ ಎನ್ನದೆ ರಾಜಾರೋಷವಾಗಿ ಮನೆ ಗೇಟ್ ತೆರೆದು ನುಗ್ಗಿ 10ಕ್ಕೂ ಹೆಚ್ಚು ಸಿಲಿಂಡರ್‌ಗಳನ್ನು ಕದ್ದು ಪರಾರಿಯಾಗಿದ್ದಾರೆ. ಆಟೋದಲ್ಲಿ ಬರುವ ಇಬ್ಬರು ಖತರ್ನಾಕ್ ಕಳ್ಳರು ಕ್ಷಣಾರ್ಧದಲ್ಲಿ ಸಿಲಿಂಡರ್ ಎಗರಿಸುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us