ಬೆಂಗಳೂರು ಸವಾರರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್ ರೋಡ್ ಸಂಪರ್ಕಿಸುವ ರಸ್ತೆ ಆರಂಭ
ಮೈಸೂರು ರಸ್ತೆ ಕಡೆಯಿಂದ ಕೆಂಗೇರಿ ಸೇರಿ ಇತರೆ ಕಡೆ ಪ್ರಯಾಣಿಸುವ ವಾಹನ ಸವಾರರಿಗೆ ನೈಸ್ ಸಂಸ್ಥೆ ಸದ್ಯದಲ್ಲಿಯೇ ಗುಡ್ ನ್ಯೂಸ್ ನೀಡಲಿದೆ. ಹೌದು... ಬೆಂಗಳೂರಿನ ದೀಪಾಂಜಲಿನಗರ ಮತ್ತು ಪಿಇಎಸ್ ಕಾಲೇಜು ಸಂಪರ್ಕಿಸುವ ನೈಸ್ ರಸ್ತೆಯ ಮತ್ತೊಂದು ಸಂಪರ್ಕ ಮಾರ್ಗ ಶೀಘ್ರದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ. ಇದರ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ. ಇದರಿಂದ ಈ ಭಾಗದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಗಲಿದೆ.
ಬೆಂಗಳೂರು, (ಫೆಬ್ರವರಿ 22): ಮೈಸೂರು ರಸ್ತೆ ಕಡೆಯಿಂದ ಕೆಂಗೇರಿ ಸೇರಿ ಇತರೆ ಕಡೆ ಪ್ರಯಾಣಿಸುವ ವಾಹನ ಸವಾರರಿಗೆ ನೈಸ್ ಸಂಸ್ಥೆ ಸದ್ಯದಲ್ಲಿಯೇ ಗುಡ್ ನ್ಯೂಸ್ ನೀಡಲಿದೆ. ಹೌದು… ಬೆಂಗಳೂರಿನ ದೀಪಾಂಜಲಿನಗರ ಮತ್ತು ಪಿಇಎಸ್ ಕಾಲೇಜು ಸಂಪರ್ಕಿಸುವ ನೈಸ್ ರಸ್ತೆಯ ಮತ್ತೊಂದು ಸಂಪರ್ಕ ಮಾರ್ಗ ಶೀಘ್ರದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ. ಇದರ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ. ಇದರಿಂದ ಈ ಭಾಗದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಗಲಿದೆ.
1.5 ಕಿ.ಮೀ ಹೊಂದಿರುವ ದೀಪಾಂಜಲಿ ನಗರ ಜಂಕ್ಷನ್‌ನಿಂದ ಹೊಸಕೆರೆಹಳ್ಳಿ ಪಿಇಎಸ್ ಕಾಲೇಜಿನ ಹತ್ತಿರವಿರುವ ಈ ಮಾರ್ಗದ ಬಹುತೇಕ ನಿರ್ಮಾಣ ಪೂರ್ಣಗೊಂಡಿದ್ದು, ಅಂತಿಮ ಕೆಲಸಗಳು ಭರದಿಂದ ಸಾಗುತ್ತಿದೆ. ಈ ಮಾರ್ಗ ನೈಸ್ ರೋಡ್‌ಗೆ ಸಂಪರ್ಕ ಕಲ್ಪಿಸಲಿದ್ದು,. ರಸ್ತೆ ಸಂಚಾರಕ್ಕೆ ಮುಕ್ತವಾದರೆ ನಗರದ ಹೊಸೂರು, ಎಲೆಕ್ಟ್ರಾನಿಕ್ ಸಿಟಿ, ಮೈಸೂರು ರಸ್ತೆ ಹಾಗೂ ತುಮಕೂರು ರಸ್ತೆಯಂತಹ ಪ್ರಮುಖ ಸ್ಥಳಗಳಿಗೆ ಸಂಪರ್ಕ ಮತ್ತಷ್ಟು ಸುಲಭವಾಗಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್

