ದಿನಸಿ ಮಾರ್ಟ್ ಮುಂದೆ ರೌಡಿಸಂ: ಡೆಲಿವರಿ ಬಾಯ್ಸ್​ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು!

Updated on: Feb 07, 2026 | 2:28 PM

ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಕಡಿವಾಣ ಇಲ್ಲದಂತಾಗಿದೆ. ಈಶಾನ್ಯ ವಿಭಾಗದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೇನಹಳ್ಳಿ ಸಮೀಪದ ದಿನಸಿ ಡೆಲಿವರಿ ಮಾರ್ಟ್ ಬಳಿ ಡೆಲಿವರಿ ಬಾಯ್ಸ್ ಮೇಲೆ ಮನಬಂದಂತೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ದಿನಸಿ ಆರ್ಡರ್ ಪಡೆಯಲು ಬಂದಿದ್ದ ಸಿಬ್ಬಂದಿಯ ಮೇಲೆ ಐದಾರು ಮಂದಿ ಕಿಡಿಗೇಡಿಗಳು ಗುಂಪುಗುಂಪಾಗಿ ದಾಳಿ ನಡೆಸಿ, ಹೆಲ್ಮೆಟ್ ಹಾಗೂ ಕೈಗೆ ಸಿಕ್ಕ ವಸ್ತುಗಳಿಂದ ಥಳಿಸಿದ್ದಾರೆ. ಮಾರ್ಟ್ ಒಳಗಡೆ ನುಗ್ಗಿಯೂ ಹಲ್ಲೆ ನಡೆಸಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. ಈ ಘಟನೆಯಿಂದ ಬೆಚ್ಚಿಬಿದ್ದ ಡೆಲಿವರಿ ಬಾಯ್ಸ್, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು, ಫೆಬ್ರುವರಿ 07: ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಕಡಿವಾಣ ಇಲ್ಲದಂತಾಗಿದೆ. ಈಶಾನ್ಯ ವಿಭಾಗದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೇನಹಳ್ಳಿ ಸಮೀಪದ ದಿನಸಿ ಡೆಲಿವರಿ ಮಾರ್ಟ್ ಬಳಿ ಡೆಲಿವರಿ ಬಾಯ್ಸ್ ಮೇಲೆ ಮನಬಂದಂತೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ದಿನಸಿ ಆರ್ಡರ್ ಪಡೆಯಲು ಬಂದಿದ್ದ ಸಿಬ್ಬಂದಿಯ ಮೇಲೆ ಐದಾರು ಮಂದಿ ಕಿಡಿಗೇಡಿಗಳು ಗುಂಪುಗುಂಪಾಗಿ ದಾಳಿ ನಡೆಸಿ, ಹೆಲ್ಮೆಟ್ ಹಾಗೂ ಕೈಗೆ ಸಿಕ್ಕ ವಸ್ತುಗಳಿಂದ ಥಳಿಸಿದ್ದಾರೆ. ಮಾರ್ಟ್ ಒಳಗಡೆ ನುಗ್ಗಿಯೂ ಹಲ್ಲೆ ನಡೆಸಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. ಈ ಘಟನೆಯಿಂದ ಬೆಚ್ಚಿಬಿದ್ದ ಡೆಲಿವರಿ ಬಾಯ್ಸ್, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More