ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ, ಖುದ್ದು ರಸ್ತೆಗಿಳಿದು ಪರಿಶೀಲನೆ

Edited By:

Updated on: Sep 30, 2026 | 6:36 PM

ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ಸಂಖ್ಯೆ ಹನುಮಂತನ ಬಾಲದಂತೆ ದೊಡ್ಡದಾಗುತ್ತಲೇ ಸಾಗುತ್ತಿದೆ. ಇದರಿಂದ ವಾಹನ ಸವಾರರು ರೋಸಿ ಹೋಗಿದ್ದಾರೆ. ಇನ್ನು ಈ ರಸ್ತೆ ಗುಂಡಿಗಳಿಂದಲೇ ವಾಹನಸ ಸಂಚಾರದ ದಟ್ಟಣೆ ಉಂಟಾಗುತ್ತಿದ್ದು, ಈ ಸಂಬಂಧ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕ ಅಸಮಾಧಾನ ಹೊರಹಾಕುತ್ತಿದ್ದಾರೆ. ಈ ಸಂಬಂಧ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌ ಅವರು ಗುಂಡಿ ಮುಕ್ತ ರಸ್ತೆಗೆ ಪಣ

ಬೆಂಗಳೂರು (ಸೆಪ್ಟೆಂಬರ್.30): ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ಸಂಖ್ಯೆ ಹನುಮಂತನ ಬಾಲದಂತೆ ದೊಡ್ಡದಾಗುತ್ತಲೇ ಸಾಗುತ್ತಿದೆ. ಇದರಿಂದ ವಾಹನ ಸವಾರರು ರೋಸಿ ಹೋಗಿದ್ದಾರೆ. ಇನ್ನು ಈ ರಸ್ತೆ ಗುಂಡಿಗಳಿಂದಲೇ ವಾಹನಸ ಸಂಚಾರದ ದಟ್ಟಣೆ ಉಂಟಾಗುತ್ತಿದ್ದು, ಈ ಸಂಬಂಧ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕ ಅಸಮಾಧಾನ ಹೊರಹಾಕುತ್ತಿದ್ದಾರೆ. ಈ ಸಂಬಂಧ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌ ಅವರು ಗುಂಡಿ ಮುಕ್ತ ರಸ್ತೆಗೆ ಪಣ ತೊಟ್ಟಿದ್ದು, ಇದಕ್ಕೆ ಪೂರಕವೆಂಬಂತೆ ಇಂದು (ಸೆ.30) ವರ್ತೂರು–ಗುಂಜೂರು ಸಂಪರ್ಕ ರಸ್ತೆಯ ಕಾಮಗಾರಿ ಹಾಗೂ ಸಂಚಾರ ವ್ಯವಸ್ಥೆ ಪರಿಶೀಲಿಸಿದರು. ಈ ವೇಳೆ ರಸ್ತೆಯಲ್ಲಿರುವ ಗುಂಡಿಗಳನ್ನು ಕಂಡು ಅಧಿಕಾರಿಗಳ ವಿರುದ್ಧ ಬೇಸರಗೊಂಡಿದ್ದು, ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿ ರಸ್ತೆ ಗುಂಡಿಗಳನ್ನು ತಕ್ಷಣ ಮುಚ್ಚುವಂತೆ ನಿರ್ದೇಶನ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More