ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ

Edited By:

Updated on: Nov 09, 2026 | 7:02 AM

ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಮೊದಲ ದಿನವೇ ಪಟಾಕಿ ದುರಂತ ಸಂಭವಿಸಿದ್ದು, ಒಟ್ಟು 32 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 13 ಮಕ್ಕಳು ಮತ್ತು 7 ವಯಸ್ಕರು ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ 9 ಮಂದಿ ಹಾಗೂ ಶಂಕರ ಮತ್ತು ಪ್ರಭಾ ಆಸ್ಪತ್ರೆಗಳಲ್ಲಿ ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಚ್ಚರಿಕೆಗಳ ಹೊರತಾಗಿಯೂ ಇಂತಹ ಘಟನೆಗಳು ಪ್ರತಿ ವರ್ಷ ಮರುಕಳಿಸುತ್ತಿವೆ.

ಬೆಂಗಳೂರು, ನವೆಂಬರ್​​ 09: ದೀಪಾವಳಿ ಹಬ್ಬದ ಮೊದಲ ದಿನವೇ ಸಾಲು ಸಾಲು ಪಟಾಕಿ ದುರಂತಗಳು ಸಂಭವಿಸಿದ್ದು, ಬೆಂಗಳೂರಲ್ಲಿ ಮಕ್ಕಳು ಮತ್ತು ವಯಸ್ಕರು ಸೇರಿ ಒಟ್ಟಾರೆ 32 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ನಾರಾಯಣ ನೇತ್ರಾಲಯದಲ್ಲಿ 20 ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಒಂಬತ್ತು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಇಬ್ಬರು ಮತ್ತು ಪ್ರಭಾ ಕಣ್ಣಿನ ಆಸ್ಪತ್ರೆಯಲ್ಲಿ ಓರ್ವ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ. ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಪ್ರತಿ ವರ್ಷವೂ ಇಂತಹ ಪಟಾಕಿ ದುರಂತಗಳು ಸಂಭವಿಸುತ್ತಲೇ ಇರುತ್ತವೆ. ಪಟಾಕಿ ಸಿಡಿಸುವಾಗ ಸುರಕ್ಷತಾ ಕ್ರಮಗಳನ್ನು ಪಾಲಿಸುವುದು ಕಡ್ಡಾಯ ಎಂದು ತಜ್ಞರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More