ಲೈಂಗಿಕವಾಗಿ ಬಳಸಿಕೊಂಡು ಯುವತಿಗೆ ಮೋಸ ಆರೋಪ: ಡಿಜೆ ಹಳ್ಳಿ ಇನ್ಸ್ಪೆಕ್ಟರ್ ಸಸ್ಪೆಂಡ್
ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುನೀಲ್ ಅವರನ್ನ ಅಮಾನತು ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿದ್ದು, ಇನ್ಸ್ಪೆಕ್ಟರ್ ಹಾಗೂ ಎಎಸ್ಐ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ಇಬ್ಬರನ್ನೂ ಸಸ್ಪೆಂಡ್ ಮಾಡಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು, (ಅಕ್ಟೋಬರ್ 27): ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುನೀಲ್ ಅವರನ್ನ ಅಮಾನತು ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿದ್ದು, ಇನ್ಸ್ಪೆಕ್ಟರ್ ಹಾಗೂ ಎಎಸ್ಐ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ಇಬ್ಬರನ್ನೂ ಸಸ್ಪೆಂಡ್ ಮಾಡಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಡಿಜೆ ಹಳ್ಳಿ ಇನ್ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಚಿನ್ನು, ಮುದ್ದು ಚಾಟಿಂಗ್ ವೈರಲ್
ಪ್ರಕರಣವೊಂದರ ಸಂಬಂಧ ಠಾಣೆಗೆ ಹೋಗಿದ್ದ ವೇಳೆ ಮಹಿಳೆಗೆ ಸಹಾಯ ಮಾಡುವುದಾಗಿ ನಂಬರ್ ತೆಗೆದುಕೊಂಡು ವಾಟ್ಸಪ್ ಚಾಟ್ ಮೂಲಕ ಪರಿಚಯ ಮಾಡಿಕೊಂಡಿದ್ದರು.ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿದ್ದು, 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ.ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದು, ನ್ಯಾಯಕ್ಕಾಗಿ ಪೊಲೀಸ್ ಮಹಾನಿರ್ದೇಶಕರ ಮೊರೆ ಹೋಗಿದ್ದರು.
