ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ

Edited By:

Updated on: Sep 29, 2026 | 12:26 PM

ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮಟನ್ ಶಾಪ್‌ವೊಂದರಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಜುನೈದ್ ಪಾಷಾ ಮತ್ತು ರಿಜ್ವಾನ್ ಬೇಗ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ 10 ಲಕ್ಷದ 60 ಸಾವಿರ ಮೌಲ್ಯದ 106 ಗ್ರಾಂ ಎಂಡಿಎಂಎ, ನಗದು, ಮೊಬೈಲ್ ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು, ಸೆಪ್ಟೆಂಬರ್ 29: ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಮಟನ್ ಶಾಪ್‌ವೊಂದರಲ್ಲಿ ಎಂಡಿಎಂಎ ಮಾದಕ ವಸ್ತುವಿನ ಮಾರಾಟ ಜಾಲವನ್ನು ಭೇದಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಜುನೈದ್ ಪಾಷಾ ಮತ್ತು ರಿಜ್ವಾನ್ ಬೇಗ್ ಬಂಧಿತ ಆರೋಪಿಗಳು. ಪೊಲೀಸರ ತನಿಖೆಯ ಪ್ರಕಾರ, ಈ ಆರೋಪಿಗಳು ನೈಜೀರಿಯಾ ಪ್ರಜೆಯೊಬ್ಬರಿಂದ ಡ್ರಗ್ಸ್ ಅನ್ನು ತರಿಸಿಕೊಂಡು ಮಟನ್ ಶಾಪ್‌ ಅನ್ನು ಮಾರಾಟದ ತಾಣವನ್ನಾಗಿ ಮಾಡಿಕೊಂಡಿದ್ದರು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ವಿದ್ಯಾರಣ್ಯಪುರ ಪೊಲೀಸರು, ಆರೋಪಿಗಳಿಂದ ಬರೋಬ್ಬರಿ 10 ಲಕ್ಷದ 60 ಸಾವಿರ ರೂಪಾಯಿ ಮೌಲ್ಯದ 106 ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ, ಎರಡು ಮೊಬೈಲ್ ಫೋನ್‌ಗಳು, 2,590 ರೂಪಾಯಿ ನಗದು ಮತ್ತು ಒಂದು ದ್ವಿಚಕ್ರ ವಾಹನವನ್ನು ಸಹ ಜಪ್ತಿ ಮಾಡಲಾಗಿದೆ.

ಡ್ರಗ್ಸ್ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ ಎಂಬ ಆರೋಪಗಳ ನಡುವೆ, ಸಣ್ಣ ಅಂಗಡಿಗಳನ್ನೂ ಸಹ ಮಾದಕ ವಸ್ತು ಮಾರಾಟಕ್ಕೆ ಬಳಸಿಕೊಳ್ಳುತ್ತಿರುವುದು, ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕೃತ್ಯಗಳು ನಡೆಯುತ್ತಿರುವುದು ಆತಂಕ ಮೂಡಿಸಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More