ಬೆಂಗಳೂರಲ್ಲಿ 55 ಕೋಟಿ ರೂ ಡ್ರಗ್ಸ್​​ ಪತ್ತೆ: ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್

Edited By:

Updated on: Dec 28, 2025 | 3:08 PM

ಬೆಂಗಳೂರಿನಲ್ಲಿ ಹೊಸ ವರ್ಷದ ಹೊಸ್ತಿಲಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳನ್ನು ಭೇದಿಸಿ ನಾಲ್ವರನ್ನು ಬಂಧಿಸಲಾಗಿದೆ. ಮಹಾರಾಷ್ಟ್ರ ANTF ಕಾರ್ಯಾಚರಣೆ ನಡೆಸಿದ್ದು, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಶಪಡಿಸಿಕೊಂಡಿದ್ದು ಕಚ್ಚಾ ವಸ್ತುಗಳೆಂದು ಸ್ಪಷ್ಟಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಡಿಸೆಂಬರ್​​ 28: ಹೊಸ ವರ್ಷದ ಸಂಭ್ರಮದ ಹೊಸ್ತಿಲಲ್ಲೇ ಮೂರು ಬೃಹತ್ ಡ್ರಗ್ಸ್ ಫ್ಯಾಕ್ಟರಿಗಳನ್ನು ಭೇದಿಸಲಾಗಿದೆ. ಮಹಾರಾಷ್ಟ್ರದ ಎಎನ್‌ಟಿಎಫ್ ಡಿಸೆಂಬರ್ 26ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಹೊರಮಾವು, ಯರಪನಹಳ್ಳಿ ಮತ್ತು ಕಣ್ಣೂರು ಪ್ರದೇಶಗಳಲ್ಲಿ ಸಿಂಥೆಟಿಕ್ ಡ್ರಗ್ಸ್ ಮತ್ತು ಎಂ.ಡಿ.ಎಂ.ಎ. ತಯಾರಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಲಾಗಿದೆ. ಇನ್ನು ಈ ಬಗ್ಗೆ ಗೃಹ ಸಚಿವ ಜಿ ಪರಮೇಶರ್​​ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಮಹಾರಾಷ್ಟ್ರ ಪೊಲೀಸರು 55 ಕೋಟಿ ರೂ ಮೌಲ್ಯದ್ದು ಎಂದಿದ್ದಾರೆ. ಅದು 1 ಕೋಟಿ 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ಕಚ್ಚಾ ವಸ್ತು. ಮಹಾರಾಷ್ಟ್ರ ಪೊಲೀಸರು ಹೇಳಿರುವುದು ಸತ್ಯಕ್ಕೆ ದೂರವಾಗಿದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.