ಕುಡಿದ ಮತ್ತಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ವಿದ್ಯಾರ್ಥಿ: ಪಾದಚಾರಿ ಸಾವು
ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಪಾದಚಾರಿ ಅಸುನೀಗಿರುವ ಘಟನೆ ಡಿಸೆಂಬರ್ 22ರಂದು ರಾತ್ರಿ ನಡೆದಿದೆ. ಮದ್ಯಪಾನ ಮಾಡಿ ವಿದ್ಯಾರ್ಥಿ ಕಾರು ಚಾಲನೆ ಮಾಡಿದ ಪರಿಣಾಮ ರಸ್ತೆ ಬದಿ ನಿಂತಿದ್ದ ಕಾರುಗಳಿಗೂ ಡ್ಯಾಮೇಜ್ ಆಗಿದೆ. ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, HSR ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು, ಡಿಸೆಂಬರ್ 28: ವಿದ್ಯಾರ್ಥಿಯೋರ್ವ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ನಡೆದ ಅಪಘಾತದಲ್ಲಿ ಪಾದಚಾರಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ನ 27ನೇ ಕ್ರಾಸ್ನಲ್ಲಿ ನಡೆದಿದೆ. ಡಿಸೆಂಬರ್ 22ರಂದು ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವೇಗವಾಗಿ ಬಂದ ಆಡಿ ಕಾರು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಬೆಳಗಾವಿ ಜಿಲ್ಲೆ ಬೈಲಹೊಂಗಲ ಮೂಲದ ಸಂತೋಷ್(26) ಅಸುನೀಗಿದ್ದಾರೆ. ಅಪಘಾತದ ರಭಸಕ್ಕೆ ರಸ್ತೆ ಬದಿ ನಿಂತಿದ್ದ ಕಾರುಗಳಿಗೂ ಡ್ಯಾಮೇಜ್ ಆಗಿದೆ. ಮೃತ ಯುವಕ ಬೆಂಗಳೂರಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಕಾರು ಚಾಲಕ ಅಬ್ದುಲ್ ರೆಹಮಾನ್ನನ್ನು ಪೊಲೀಸರು ಬಂಧಿಸಿದ್ದಾರೆ. ಪಾದಚಾರಿಗೆ ಕಾರು ಡಿಕ್ಕಿಯಾಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, HSR ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕ ಮದ್ಯ ಸೇವಿಸಿದ್ದ ಹಿನ್ನೆಲೆ ರಕ್ತದ ಮಾದರಿಯನ್ನು ಪರೀಕ್ಷೆಗೆ ರವಾನೆ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 28, 2025 07:37 AM
ಕೆಪಿಎಸ್ಸಿ ನೇಮಕಾತಿ ಹಗರಣ: 1.5 ಕೋಟಿ, 22 ಲಕ್ಷದ ಚಿನ್ನಾಭರಣ ಜಪ್ತಿ
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!

