ಕಾರಿಗೆ ಡಿಕ್ಕಿ ಹೊಡೆದ ಲಾರಿ: ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು
ಬೆಂಗಳೂರು ಗ್ರಾಮಾಂತರ ಮಾಗಡಿ ಬಳಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ಕ್ಯಾಂಟರ್ ಚಾಲಕನಿಂದ ಭೀಕರ ಅಪಘಾತ ಸಂಭವಿಸಿದೆ. ಅತಿ ವೇಗದಲ್ಲಿ ಬಂದ ಕ್ಯಾಂಟರ್ ಸರಣಿ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾಗಡಿ, ಮಾ.11: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದರಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಪಲ್ಟಿಯಾಗಿದ್ದು, ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಗ್ರಾಮದ ಬಳಿ ನಡೆದಿದೆ. ಕುಣಿಗಲ್ ಮೂಲದ ರಾಮು ಎಂಬ ಕ್ಯಾಂಟರ್ ಚಾಲಕ ಕುಡಿದ ಅಮಲಿನಲ್ಲಿ ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ನಿಯಂತ್ರಣ ತಪ್ಪಿದ ಕ್ಯಾಂಟರ್ ಎದುರಿಗೆ ಹೋಗುತ್ತಿದ್ದ ಕಾರು ಹಾಗೂ ಮತ್ತೇರಡು ವಾಹನಗಳಿಗೆ ಸರಣಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರೊಂದು ರಸ್ತೆಯಲ್ಲೇ ಪಲ್ಟಿಯಾಗಿದ್ದು, ಅದರಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ನಂತರವೂ ದರ್ಪ ತೋರಿದ ಚಾಲಕ ರಾಮು ಮೇಲೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೊಚ್ಚಿಗೆದ್ದ ಗ್ರಾಮಸ್ಥರು ಚಾಲಕನನ್ನು ಹಿಡಿದು ಸ್ಥಳದಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮಾಗಡಿ ಪೊಲೀಸರು, ಪರಿಸ್ಥಿತಿಯನ್ನು ನಿಯಂತ್ರಿಸಿ ಚಾಲಕ ರಾಮುವನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ

