ನ್ಯೂ ಇಯರ್ ಸಂಭ್ರಮದ ಮಧ್ಯೆ ಯುವಕರ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
New Year 2026: ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಹೊಸ ವರ್ಷಾಚರಣೆ ವೇಳೆ ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮಹಿಳಾ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಪೊಲೀಸರು ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಹಿಳೆಯರ ಸುರಕ್ಷತೆಗಾಗಿ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಿ.ಸಿ.ಟಿ.ವಿ. ಹಾಗೂ ಎ.ಐ. ತಂತ್ರಜ್ಞಾನದ ಮೂಲಕ ನಿಗಾ ವಹಿಸಲಾಗಿದೆ.
ಬೆಂಗಳೂರು, ಡಿಸೆಂಬರ್ 31: ರಾಜ್ಯಾದ್ಯಂತ ಹೊಸ ವರ್ಷ 2026ರ ಸಂಭ್ರಮಾಚರಣೆ ಶುರುವಾಗಿದೆ. ಈ ಮಧ್ಯೆ ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ಕುಡಿದ ಮತ್ತಿನಲ್ಲಿ ಓರ್ವ ವ್ಯಕ್ತಿ ಮಹಿಳಾ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿರುವಂತಹ ಘಟನೆ ನಡೆದಿದೆ. ಸದ್ಯ ಆತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ನೋಢಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
