ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ! ಅರಣ್ಯ ಇಲಾಖೆಯ ವಿರುದ್ಧ ಕುಟುಂಬಸ್ಥರ ಆಕ್ರೋಶ

Edited By:

Updated on: Sep 28, 2026 | 10:58 AM

ಬೆಂಗಳೂರಿನ ಮೈಸೂರು ರಸ್ತೆಯ ಅಂಚೆಪಾಳ್ಯದಲ್ಲಿ ಮುಂಜಾನೆ ವಾಕಿಂಗ್ ತೆರಳಿದ್ದ ನಾಗರಾಜ್ (60) ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಬನ್ನೇರುಘಟ್ಟದಿಂದ ಬಂದ ಶಂಕಿತ ಆನೆಯಿಂದ ಈ ದುರಂತ ಸಂಭವಿಸಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯ ಖಂಡಿಸಿ ಹಾಗೂ ಮೃತರ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹಿಸಿ ಸ್ಥಳೀಯರು ಆರ್‌ಆರ್ ಆಸ್ಪತ್ರೆ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 28: ನಗರದ ಮೈಸೂರು ರಸ್ತೆಯ ರಾಜರಾಜೇಶ್ವರಿ ಆಸ್ಪತ್ರೆ ಹಿಂಭಾಗದ ಅಂಚೆಪಾಳ್ಯದಲ್ಲಿ ಮುಂಜಾನೆ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಎಂದಿನಂತೆ ವಾಕಿಂಗ್ ತೆರಳಿದ್ದ ಕೂಲಿ ಕಾರ್ಮಿಕ ನಾಗರಾಜ್ (60) ಎಂಬುವವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಸೊಂಡಿಲಿನಿಂದ ಎತ್ತಿ ಎಸೆದ ಪರಿಣಾಮ ಅವರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಬನ್ನೇರುಘಟ್ಟದಿಂದ ಕಗ್ಗಲೀಪುರ ಅರಣ್ಯ ವಲಯದ ಮೂಲಕ ಈ ಆನೆ ನಾಡಿಗೆ ಬಂದಿರಬಹುದು ಎಂದು ಶಂಕಿಸಲಾಗಿದ್ದು, ಅರಣ್ಯಾಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ಮಧ್ಯೆ, ಆರ್‌ಆರ್ ಆಸ್ಪತ್ರೆ ಆವರಣದಲ್ಲಿ ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವೆಂದು ಆಕ್ರೋಶ ಹೊರಹಾಕಿದ್ದು, ಸ್ಥಳಕ್ಕೆ ಅರಣ್ಯ ಸಚಿವರು ಭೇಟಿ ನೀಡಿ ನಾಲ್ವರು ಹೆಣ್ಣು ಮಕ್ಕಳಿರುವ ನಾಗರಾಜ್ ಕುಟುಂಬಕ್ಕೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಕುಂಬಳಗೋಡು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More