ಬೆಂಗಳೂರಲ್ಲಿ ಒಂದೇ ಕುಟುಂಬದ 7 ಜನರ ಹತ್ಯೆಗೆ ಅಸಲಿಗೆ ಕಾರಣವೇನು ಗೊತ್ತಾ?

Edited By:

Updated on: Nov 06, 2026 | 11:17 AM

ಬೆಂಗಳೂರಿನ ರಾಜಾಜಿನಗರದಲ್ಲಿ ಪತ್ನಿ ಸೇರಿದಂತೆ ಏಳು ಜನರ ಭೀಕರ ಕೊಲೆ ಪ್ರಕರಣ ನಡೆದಿದೆ. ಆರೋಪಿ ಇಂದುಶೇಖರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಸ್ತಿ ವಿಚಾರ ಅಥವಾ ಮಗಳ ಪ್ರೇಮ ಪ್ರಕರಣವೇ ಹತ್ಯೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ನಂದಿಬೆಟ್ಟ ಸೇರಿ ಹಲವೆಡೆ ಮೃತದೇಹಗಳು ಪತ್ತೆಯಾಗಿವೆ. ಪೊಲೀಸರಿಂದ ಹೆಚ್ಚಿನ ವಿಚಾರಣೆ ಮುಂದುವರಿದಿದೆ.

ಬೆಂಗಳೂರು, ನವೆಂಬರ್ 06: ಬೆಂಗಳೂರಿನ ರಾಜಾಜಿನಗರದ ಪಾರ್ಶ್ವಸ್ಥಳದಲ್ಲಿ ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಜನರ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯ ಎಸಗಿರುವ ಆರೋಪಿ ಇಂದುಶೇಖರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಗೆ ಪ್ರಮುಖ ಕಾರಣ ಆಸ್ತಿ ವಿವಾದ ಎಂದು ಪ್ರಾಥಮಿಕವಾಗಿ ಕೇಳಿಬರುತ್ತಿದ್ದು, ಮತ್ತೊಂದೆಡೆ ಮಗಳ ಪ್ರೇಮ ಪ್ರಕರಣವೂ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಸ್ಥಳೀಯರ ಮಾಹಿತಿ ಪ್ರಕಾರ, ಸುಮಾರು 15 ರಿಂದ 20 ದಿನಗಳ ಹಿಂದೆ ಈ ಘಟನೆ ಸಂಭವಿಸಿದೆ. ಆರೋಪಿ ಒಬ್ಬೊಬ್ಬರನ್ನೇ ಕೊಲೆ ಮಾಡಿ, ಮೃತದೇಹಗಳನ್ನು ನಂದಿಬೆಟ್ಟ, ಚಾರ್ಮಾಡಿ ಘಾಟ್ ಮತ್ತು ಚಾಮುಂಡಿಬೆಟ್ಟ ಸೇರಿದಂತೆ ಹಲವು ಕಡೆಗಳಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ನಂದಿಬೆಟ್ಟದಲ್ಲಿ ಅವರ ಬಾಮೈದನ ಪುತ್ರನ ಮೃತದೇಹ ಪತ್ತೆಯಾಗಿದ್ದು, ಉಳಿದ ಮೃತದೇಹಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇಂದುಶೇಖರ್ ಈ ಹಿಂದೆ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಪ್ರಕರಣದಲ್ಲೂ ಬಂಧಿತನಾಗಿದ್ದ ಎಂದು ತಿಳಿದುಬಂದಿದೆ. ಕೊಲೆಯ ನಿಖರ ಕಾರಣ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More