Bengaluru Fire Accident: ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ಅಗ್ನಿ ಅವಘಡ, ಹೊತ್ತಿ ಉರಿದ ಮೂರು ಅಂತಸ್ತಿನ ಕಟ್ಟಡ

| Updated By: Rakesh Nayak Manchi

Updated on: Dec 19, 2023 | 9:33 AM

ಬೆಂಗಳೂರಿನಲ್ಲಿ ಮತ್ತೊಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಗರದ ಮಾರತ್ತ​​​​​​ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬ್ರಿಡ್ಜ್​ ಬಳಿ ಇರುವ ಮೂರು ಅಂತಸ್ತಿನ ಕಟ್ಟಡಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನಿನ್ನೆ ರಾತ್ರಿ ಬೆಂಕಿ ಹತ್ತಿಕೊಂಡಿದ್ದು, ಅಂಗಡಿ ಪಕ್ಕದಲ್ಲಿದ್ದ ಟ್ರಾನ್ಸ್​ಫಾರ್ಮರ್​​​ ಕೂಡ ಬೆಂಕಿಗಾಹುತಿಯಾಗಿದೆ. ಇದರ ವಿಡಿಯೋ ಇಲ್ಲಿದೆ.

ಬೆಂಗಳೂರು, ಡಿ.19: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ (Bengaluru Fire Accident) ಸಂಭವಿಸಿದೆ. ನಗರದ ಮಾರತ್ತ​​​​​​ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬ್ರಿಡ್ಜ್​ ಬಳಿ ಇರುವ ಮೂರು ಅಂತಸ್ತಿನ ಕಟ್ಟಡಲ್ಲಿ ನಿನ್ನೆ ರಾತ್ರಿ 11.45ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಲೂಯಿಸ್ ಫಿಲಿಪ್ ಬಟ್ಟೆ ಶೋರೂಂನಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಪಕ್ಕದ ಅಂಗಡಿಗಳು, ಟ್ರಾನ್ಸ್​ಫಾರ್ಮರ್​​​ಗೆ ಹರಡಿದೆ.

ಈ ವೇಳೆ ಕಟ್ಟಡದಲ್ಲಿದ್ದ ನಾಲ್ವರು ಪಕ್ಕದ ಕಟ್ಟಡಕ್ಕೆ ಹಾರಿದ್ದು, ಒಬ್ಬನ್ನನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಸುಮಾರು ಎರಡೂವರೆ ಗಂಟೆ ಕಾರ್ಯಾಚರಣೆ ಬಳಿಕ ಬೆಂಕಿ ನಂದಿಸಿದ್ದಾರೆ,. ಅಂಗಡಿಯಲ್ಲಿದ್ದ ಅಪಾರ ಮೌಲ್ಯದ ಬಟ್ಟೆ, ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿಗೆ ಗಾಯವಾಗಿದೆ. ಬಟ್ಟೆ ಶೋರೂಂನ ಸ್ವಿಚ್​​ ಬೋರ್ಡ್​ನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ