ಬೆಂಗಳೂರಿನಲ್ಲಿ ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ

Edited By:

Updated on: Oct 21, 2026 | 3:13 PM

ಮುಖ್ಯಾಂಶಗಳು

  • ಅಪಾರ್ಟ್ಮೆಂಟ್​ನ 8ನೇ ಮಹಡಿಯಲ್ಲಿ ಅಗ್ನಿ ಅವಘಡ
  • ಬೆಂಗಳೂರಿನ ಉತ್ತರಹಳ್ಳಿಯ ಅಪಾರ್ಟ್ಮೆಂಟ್​ನಲ್ಲಿ ಘಟನೆ
  • ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸಲು ಹರಸಾಹಸ

ಮಧ್ಯಾಹ್ನ ಅಪಾರ್ಟ್ಮೆಂಟ್‌ನ ಎಂಟನೇ ಮಹಡಿಯಲ್ಲಿ ಸಿಲಿಂಡರ್ ಸ್ಫೋಟದಿಂದ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಅಕ್ಕಪಕ್ಕದ ಮನೆಗಳಿಗೂ ಹಾನಿ ಮಾಡಿದೆ. ಕೇವಲ 5 ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಅವರ ಕಾರ್ಯದಕ್ಷತೆ ಬಗ್ಗೆ ನಿವಾಸಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಕೂಡ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 21: ಎಲ್ಲೆಡೆ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಮಧ್ಯೆ ನಗರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಉತ್ತರಹಳ್ಳಿಯ ಅಪಾರ್ಟ್ಮೆಂಟ್​ನ 8ನೇ ಮಹಡಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಹಬ್ಬದ ಪ್ರಯುಕ್ತ ಪೂಜೆ ಮಾಡಿ ದೀಪ ಹಚ್ಚಲಾಗಿದೆ. ಕೆಲಸದ ನಿಮಿತ್ತ  ಮನೆಯ ಮಾಲೀಕರು ಹೊರಹೋಗಿದ್ದಾರೆ. ಈ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅಕ್ಕಪಕ್ಕ‌ ನಿವಾಸಿಗಳು ನೋಡಿ ಅಗ್ನಿಶಾಮಕ ದಳಕ್ಕೆ ಮಾಹಿತಿ ‌ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಚರಣೆ ಮಾಡುತ್ತಿರುವ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದೆ. ಮನೆಯಲ್ಲಿದ್ದ ಸಿಲಿಂಡರ್ ಬ್ಲಾಸ್ಟ್ ಆಗಿದೆ ಎನ್ನಲಾಗುತ್ತಿದ್ದು, ಯಾವ ವಸ್ತು ಬ್ಲಾಸ್ಟ್ ಆಗಿದೆ ಎಂದು ಅಗ್ನಿ ಶಾಮಕ ಸಿಬ್ಬಂದಿ ಪರಿಶೀಲನೆ ಮಾಡುತ್ತಿದ್ದಾರೆ. ದುರಂತದಲ್ಲಿ ಅಕ್ಕಪಕ್ಕದ ಮನೆಗಳಿಗೂ ಹಾನಿಯುಂಟಾಗಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More