ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಪಟಾಕಿ ಅವಘಡಗಳಿಂದ ಹೆಚ್ಚು ಮಂದಿಗೆ ಗಾಯ: ಮಿಂಟೋ ಆಸ್ಪತ್ರೆ ವೈದ್ಯರಿಂದ ಮಾಹಿತಿ

Updated on: Nov 11, 2026 | 2:38 PM

ದೀಪಾವಳಿ ಹಬ್ಬದ ಬಳಿಕ ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 46 ಪಟಾಕಿ ಗಾಯದ ಪ್ರಕರಣಗಳು ದಾಖಲಾಗಿವೆ. ನಿರ್ದೇಶಕ ಡಾ. ಸುರೇಶ್ ಬಾಬು ಪ್ರಕಾರ, ಈ ವರ್ಷ ಗಾಯಗೊಂಡವರ ಸಂಖ್ಯೆ ಹೆಚ್ಚಿದೆ. ಇದರ ಜೊತೆಗೆ, ಪಟಾಕಿಗಳ ಹೊಗೆಯಿಂದ ಬೆಂಗಳೂರಿನ ವಾಯುಮಾಲಿನ್ಯ ಗಂಭೀರ ಮಟ್ಟಕ್ಕೆ ತಲುಪಿದ್ದು, ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ.

ಬೆಂಗಳೂರು, ನವೆಂಬರ್ 11: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪಟಾಕಿ ಅವಘಡಗಳಿಂದ ಉಂಟಾದ ಗಾಯಗಳ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗಿವೆ ಎಂದು ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಈ ವರ್ಷ ಒಟ್ಟು 46 ಪ್ರಕರಣಗಳು ದಾಖಲಾಗಿವೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಸುರೇಶ್ ಬಾಬು ಮಾಹಿತಿ ನೀಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಗಾಯಗೊಂಡವರ ಸಂಖ್ಯೆ ಅಧಿಕವಾಗಿದೆ. ಹಬ್ಬ ಮುಗಿದಿದ್ದರೂ ಕೂಡ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಇಳಿಕೆಯಾಗಿಲ್ಲ. ತುಳಸಿ ಹಬ್ಬದವರೆಗೂ ಪಟಾಕಿ ಹಚ್ಚುವ ಪದ್ಧತಿ ಇರುವುದರಿಂದ ಇನ್ನೂ ಸುಮಾರು 10 ದಿನಗಳ ಕಾಲ ರೋಗಿಗಳು ಬರುವ ಸಾಧ್ಯತೆ ಇದೆ ಎಂದು ಡಾ. ಸುರೇಶ್ ಬಾಬು ತಿಳಿಸಿದ್ದಾರೆ.

ಮಂಗಳವಾರ ಒಂದೇ ದಿನ 16 ಜನರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದು, ಅವರಲ್ಲಿ ಐದು ಜನರಿಗೆ ಸಾಮಾನ್ಯ ಗಾಯಗಳಾಗಿದ್ದರೆ, 11 ಜನರು ತೀವ್ರ ಗಾಯಗೊಂಡಿದ್ದಾರೆ. 18 ಜನರು ಸ್ವತಃ ಪಟಾಕಿ ಹಚ್ಚಿ ಗಾಯಗೊಂಡಿದ್ದರೆ, 10 ಜನರು ಅಕ್ಕಪಕ್ಕ ನಿಂತು ಅಥವಾ ವೀಕ್ಷಿಸುವಾಗ ಗಾಯಗೊಂಡಿದ್ದಾರೆ. ಈ ವರ್ಷ ಪಟಾಕಿ ಹೊಡೆಯುವವರಿಗಿಂತ ಅಕ್ಕಪಕ್ಕ ನಿಂತು ಗಾಯಗೊಂಡವರ ಸಂಖ್ಯೆ ಹೆಚ್ಚಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More