ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!

Edited By:

Updated on: Sep 05, 2026 | 9:10 AM

ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶದ 64 ಪಿಜಿಗಳ ಮೇಲೆ ಆಹಾರ ಇಲಾಖೆ ದಾಳಿ ನಡೆಸಿದೆ. ನೈರ್ಮಲ್ಯ ಕೊರತೆ, ಅವಧಿ ಮೀರಿದ ಮೊಸರು, ಅಕ್ಕಿಹಿಟ್ಟು, ಆಹಾರ ಬಣ್ಣ ಮತ್ತು ಕರಿಮೆಣಸು ವಶಪಡಿಸಿಕೊಳ್ಳಲಾಗಿದೆ. ಬೊಮ್ಮಸಂದ್ರದ ನಂದನ ಎಲೈಟ್ ಪಿಜಿಯಲ್ಲಿ ಊಟದ ಮೇಜಿನ ಮೇಲೆ ತಿಗಣೆ ಔಷಧ ಪತ್ತೆಯಾಗಿ, ಊಟದ ಪ್ರದೇಶವನ್ನು ಮುಚ್ಚಲಾಗಿದೆ.

ಬೆಂಗಳೂರು, ಸೆಪ್ಟೆಂಬರ್ 05: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿರುವ ಪೇಯಿಂಗ್ ಗೆಸ್ಟ್ (ಪಿಜಿ) ವಸತಿ ಗೃಹಗಳಲ್ಲಿ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ಆಹಾರ ಇಲಾಖೆಯು ಬರೋಬ್ಬರಿ 64 ಪಿಜಿಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಈ ಬೃಹತ್ ಕಾರ್ಯಾಚರಣೆಯಲ್ಲಿ ಹಲವಾರು ಕಡೆಗಳಲ್ಲಿ ಆಹಾರ ಸುರಕ್ಷತೆಯ ಉಲ್ಲಂಘನೆಗಳು ಕಂಡುಬಂದಿವೆ.

ದಾಳಿಯ ವೇಳೆ, 23 ಪಿಜಿಗಳಿಂದ 12 ಆಹಾರ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಈ ಪರೀಕ್ಷೆಗಳ ಪ್ರಾಥಮಿಕ ವರದಿಯಲ್ಲಿ, ಮೊಸರು, ಅಕ್ಕಿಹಿಟ್ಟು, ಆಹಾರ ಬಣ್ಣ ಮತ್ತು ಕರಿಮೆಣಸು ಸೇರಿದಂತೆ ಹಲವು ಅವಧಿ ಮೀರಿದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಪಿಜಿಗಳಲ್ಲಿ ನೀಡಲಾಗುವ ಆಹಾರದ ಗುಣಮಟ್ಟದ ಬಗ್ಗೆ ಕಳವಳ ಮೂಡಿಸಿದೆ.

ಬೊಮ್ಮಸಂದ್ರದ ನಂದನ ಎಲೈಟ್ ಪಿಜಿಯಲ್ಲಂತೂ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಇಲ್ಲಿ ಕಳಪೆ ನೈರ್ಮಲ್ಯದ ಜೊತೆಗೆ ಊಟದ ಮೇಜಿನ ಮೇಲೆ ಗಲೀಜು ಕಂಡುಬಂದಿದೆ. ಅಚ್ಚರಿಯ ವಿಷಯವೆಂದರೆ, ಪಿಜಿಯ ಡೈನಿಂಗ್ ಟೇಬಲ್‌ನಲ್ಲಿ ತಿಗಣೆ ಔಷಧಿ ಕೂಡ ಪತ್ತೆಯಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ನೈರ್ಮಲ್ಯ ಉಲ್ಲಂಘನೆಯ ಆರೋಪದ ಮೇಲೆ ಈ ಪಿಜಿಯ ಊಟದ ಪ್ರದೇಶವನ್ನು ತಕ್ಷಣವೇ ಮುಚ್ಚಲು ಆದೇಶಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More