AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಶುರು: ಜಯನಗರದ ಅಶೋಕ ಪಿಲ್ಲರ್​ನಿಂದ ಫುಟ್​ಪಾತ್​ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಶುರು: ಜಯನಗರದ ಅಶೋಕ ಪಿಲ್ಲರ್​ನಿಂದ ಫುಟ್​ಪಾತ್​ ತೆರವು ಕಾರ್ಯಾಚರಣೆ ಆರಂಭ

ಗಣಪತಿ ಶರ್ಮಾ
|

Updated on: Jul 01, 2026 | 11:03 AM

Share

ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಬೆಂಗಳೂರಿನಲ್ಲಿ ವ್ಯಾಪಕ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭಿಸಿದೆ. ಜಯನಗರದ ಅಶೋಕ ಪಿಲ್ಲರ್‌ನಿಂದ ಕಾರ್ಯಾಚರಣೆ ಪ್ರಾರಂಭವಾಗಿದ್ದು, ಪಾದಚಾರಿಗಳ ಅನುಕೂಲಕ್ಕಾಗಿ ಅಂಗಡಿಗಳು ಮತ್ತು ಕಟ್ಟಡ ಸಾಮಗ್ರಿಗಳ ಒತ್ತುವರಿಯನ್ನು ತೆರವುಗೊಳಿಸಲಾಗುತ್ತಿದೆ. ಈಗಿನ ಕಾರ್ಯಾಚರಣೆ ಬಗ್ಗೆ ಮುಂಚಿತವಾಗಿಯೇ ನೋಟಿಸ್ ನೀಡಲಾಗಿದ್ದು, ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲಾಗುತ್ತಿದೆ.

ಬೆಂಗಳೂರು, ಜುಲೈ 1: ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಬೆಂಗಳೂರು ನಗರದಾದ್ಯಂತ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಹಮ್ಮಿಕೊಂಡಿದೆ. ಜಯನಗರದ ಅಶೋಕ ಪಿಲ್ಲರ್ ಸಮೀಪದಿಂದ ಬುಧವಾರ ಬೆಳಗ್ಗೆ ಕಾರ್ಯಾಚರಣೆ ಆರಂಭಗೊಂಡಿದ್ದು, ಅಂಗಡಿಗಳು ಮತ್ತು ಕಟ್ಟಡ ಕಾಮಗಾರಿಗೆ ಸಂಬಂಧಿಸಿದ ವಸ್ತುಗಳಿಂದ ಒತ್ತುವರಿ ಮಾಡಲಾಗಿದ್ದ ಫುಟ್​ಪಾತ್‌ಗಳನ್ನು ತೆರವುಗೊಳಿಸಲಾಗುತ್ತಿದೆ.

ಬೆಳಗ್ಗೆ 9:30ಕ್ಕೆ ಶುರುವಾದ ಈ ಕಾರ್ಯಾಚರಣೆಗೆ ಜೆಸಿಬಿಗಳನ್ನು ಬಳಸಲಾಗುತ್ತಿದೆ. ಸ್ಥಳೀಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರ ಬೆಂಗಾವಲು ಸಹ ಒದಗಿಸಲಾಗಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ 153 ರಲ್ಲಿ, ಅಶೋಕ ಪಿಲ್ಲರ್‌ನಿಂದ ಮಾಧವನ್ ಪಾರ್ಕ್‌ವರೆಗೆ ಈ ತೆರವು ನಡೆಯುತ್ತಿದೆ. ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಎಲ್ಲ ಒತ್ತುವರಿಗಳನ್ನು ತೆರವುಗೊಳಿಸಿ, ಭವಿಷ್ಯದಲ್ಲಿ ಮತ್ತೆ ಒತ್ತುವರಿ ಮಾಡದಂತೆ ನಿಗಾ ವಹಿಸಲು ಜಿಬಿಎ ಎಚ್ಚರಿಕೆ ವಹಿಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More