AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ: ಸಚಿವ ಕೃಷ್ಣ ಭೈರೇಗೌಡ

ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ: ಸಚಿವ ಕೃಷ್ಣ ಭೈರೇಗೌಡ

ಪ್ರಸನ್ನ ಹೆಗಡೆ
|

Updated on: Jul 06, 2026 | 12:15 PM

Share

ಬೆಂಗಳೂರಿನಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆ ತೀವ್ರಗೊಂಡಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಸಚಿವ ಕೃಷ್ಣಭೈರೇಗೌಡ ಅವರು, ಜನರ ಒಳಿತಿಗಾಗಿ ನಿಷ್ಠುರ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಶೇ 80ರಷ್ಟು ಜನರು ಒತ್ತುವರಿ ತೆರವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸುಧಾರಣೆಗೆ ಸವಾಲುಗಳನ್ನು ಎದುರಿಸುವುದು ಅನಿವಾರ್ಯ ಎಂದು ಅವರು ಹೇಳಿದ್ದಾರೆ.

ಬೆಂಗಳೂರು, ಜುಲೈ 06: ನಗರದಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆ ತೀವ್ರಗೊಂಡಿದ್ದು, ಬುಲ್ಡೋಜರ್‌ಗಳು ಈಗಾಗಲೇ ಅಖಾಡಕ್ಕಿಳಿದಿವೆ. ಈ ಕಾರ್ಯಾಚರಣೆಯ ವಿರುದ್ಧ ದೊಡ್ಡ ಮಟ್ಟದಲ್ಲಿ ಆಕ್ರೋಶ ಕೂಡ ವ್ಯಕ್ತವಾಗುತ್ತಿದೆ. ಆದರೆ, ನಗರಾಭಿವೃದ್ಧಿ ಸಚಿವರಾದ ಕೃಷ್ಣಭೈರೇಗೌಡ ಅವರು, ಜನರ ಒಳ್ಳೆಯದಕ್ಕಾಗಿ ನಿಷ್ಠುರ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ. ಯಾವುದೇ ಸುಧಾರಣೆ ಆಗಬೇಕಾದರೆ ಸವಾಲುಗಳನ್ನು ಎದುರಿಸುವುದು ಅನಿವಾರ್ಯ. ಏನೂ ಪ್ರಯತ್ನ ಮಾಡದೆ ಸುಮ್ಮನಿದ್ದರೆ ಹುದ್ದೆಯಲ್ಲಿ ಇರುವುದು ಸರಿಯಲ್ಲ ಎಂದು ಸಚಿವರು ತಿಳಿಸಿದ್ದಾರೆ. ಒತ್ತುವರಿ ತೆರವಿಗೆ ಶೇಕಡ 80ರಷ್ಟು ಜನರು ಬೆಂಬಲ ಸೂಚಿಸಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ. ಒಮ್ಮೆ ಕಾರ್ಯಕ್ಕೆ ಇಳಿದ ಮೇಲೆ ಅದನ್ನು ಪೂರ್ಣಗೊಳಿಸುವುದು ತಮ್ಮ ಕರ್ತವ್ಯ ಎಂದವರು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us