‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..

Edited By:

Updated on: Aug 25, 2026 | 9:14 PM

‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಬೆಂಗಳೂರಿನ ಗಾಂಧಿನಗರದ ಚಿತ್ರಮಂದಿರಗಳು ಸಿಂಗಾರಗೊಂಡಿವೆ. ಯಶ್ ಅವರ ಕಟೌಟ್​ಗಳು ಎಲ್ಲ ಚಿತ್ರಮಂದಿರಗಳಲ್ಲಿ ರಾರಾಜಿಸುತ್ತಿವೆ. ಮೊದಲ ದಿನ ಎಲ್ಲ ಶೋಗಳು ಹೌಸ್​ಫುಲ್ ಆಗುತ್ತಿವೆ. ಯಶ್ ಅಭಿಮಾನಿಗಳು ಎಲ್ಲ ಕಡೆಗಳಲ್ಲಿ ಸಂಭ್ರಮಿಸಲಿದ್ದಾರೆ. ಚಿತ್ರಮಂದಿರಗಳ ಎದುರು ಯಾವ ರೀತಿ ಸಿಂಗಾರ ಆಗಿದೆ ಎಂಬುದು ತಿಳಿಯಲು ಈ ವಿಡಿಯೋ ನೋಡಿ.

ಈ ವರ್ಷದ ಬಹುನಿರೀಕ್ಷಿತ ಚಿತ್ರವಾದ ‘ಟಾಕ್ಸಿಕ್’ (Toxic) ಆಗಸ್ಟ್ 26ರಂದು ಬಿಡುಗಡೆ ಆಗುತ್ತಿದೆ. ಕಿಯಾರಾ ಅಡ್ವಾಣಿ, ಯಶ್, ನಯನತಾರಾ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ, ಹುಮಾ ಖುರೇಷಿ ಮುಂತಾದವರು ನಟಿಸಿರುವ ಈ ಸಿನಿಮಾ ಬಹಳ ಗ್ರ್ಯಾಂಡ್ ಆಗಿ ತೆರೆಕಾಣುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿರುವ ಈ ಸಿನಿಮಾವನ್ನು ಮೊದಲ ದಿನ ಮೊದಲ ಶೋ ನೋಡಲು ಅಭಿಮಾನಿಗಳು ಸಜ್ಜಾಗಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಬೆಂಗಳೂರಿನ ಗಾಂಧಿನಗರದ ಚಿತ್ರಮಂದಿರಗಳು ಸಿಂಗಾರಗೊಂಡಿವೆ. ಯಶ್ ಅವರ ಕಟೌಟ್​ಗಳು ಎಲ್ಲ ಚಿತ್ರಮಂದಿರಗಳಲ್ಲಿ ರಾರಾಜಿಸುತ್ತಿವೆ. ಮೊದಲ ದಿನ ಎಲ್ಲ ಶೋಗಳು ಹೌಸ್​ಫುಲ್ ಆಗುತ್ತಿವೆ. ಯಶ್ ಅಭಿಮಾನಿಗಳು ಎಲ್ಲ ಕಡೆಗಳಲ್ಲಿ ಸಂಭ್ರಮಿಸಲಿದ್ದಾರೆ. ಗೀತು ಮೋಹನ್​ದಾಸ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದು, ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More