AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಸ ಸಾಗಾಣಿಕೆ ಟೆಂಡರ್‌ನಲ್ಲಿ ಭಾರಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ಕರಿಗೌಡ ವಿರುದ್ಧ ಇಡಿಗೆ ದೂರು

ಬೆಂಗಳೂರು ಕಸ ಸಾಗಾಣಿಕೆ ಟೆಂಡರ್‌ನಲ್ಲಿ ಭಾರಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ಕರಿಗೌಡ ವಿರುದ್ಧ ಇಡಿಗೆ ದೂರು

ವಿಕಾಸ್​ ಬಿಎಂ
| Edited By: |

Updated on: Sep 24, 2026 | 1:06 PM

Share

ಬೆಂಗಳೂರು ಕಸ ಸಾಗಾಣಿಕೆ ಟೆಂಡರ್‌ನಲ್ಲಿ ಭಾರಿ ಅಕ್ರಮದ ಆರೋಪ ಕೇಳಿಬಂದಿದೆ. ಐಎಎಸ್ ಅಧಿಕಾರಿ ಕರಿಗೌಡ ಸೇರಿದಂತೆ ಘನತ್ಯಾಜ್ಯ ನಿರ್ವಹಣಾ ಕಂಪನಿಯ ಅಧಿಕಾರಿಗಳ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ (ED) ದೂರು ನೀಡಲಾಗಿದೆ. ತ್ಯಾಜ್ಯ ವರ್ಗಾವಣೆ ಕೇಂದ್ರಗಳ ಟೆಂಡರ್‌ನಲ್ಲಿ ನಿಯಮ ಉಲ್ಲಂಘನೆ, ಭದ್ರತಾ ಠೇವಣಿಯಲ್ಲಿ ವಿನಾಯಿತಿ ನೀಡಿದ ಆರೋಪಗಳು ಕೇಳಿಬಂದಿವೆ. ಅಕ್ರಮದ ಬಗ್ಗೆ ಈಗಾಗಲೇ ಸಿಎಂ ಡಿಕೆಶಿ ತನಿಖೆಗೆ ಆದೇಶಿಸಿದ್ದಾರೆ ಎಂಬುದಿಲ್ಲಿ ಗಮನಾರ್ಹ.

ಬೆಂಗಳೂರು, ಸೆಪ್ಟೆಂಬರ್​​ 22: ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಕಂಪನಿಯಿಂದ ಕಸ ಸಾಗಾಣಿಕೆ ಟೆಂಡರ್‌ನಲ್ಲಿ ಭಾರಿ ಅಕ್ರಮ ಆರೋಪ ಕೇಳಿಬಂದಿದೆ. ಐಎಎಸ್ ಅಧಿಕಾರಿ ಕರಿಗೌಡ ಸೇರಿದಂತೆ ಕಸ ವಿಲೇವಾರಿ ಸಂಸ್ಥೆಯ ಮುಖ್ಯಸ್ಥರ ವಿರುದ್ಧವೂ ಇಡಿಗೆ ದೂರು ಸಲ್ಲಿಕೆಯಾಗಿದೆ. ಅಕ್ರಮದ ಬಗ್ಗೆ ಈಗಾಗಲೇ ಸಿಎಂ ಡಿಕೆಶಿ ತನಿಖೆಗೆ ಆದೇಶಿಸಿದ್ದಾರೆ. ಟೆಂಡರ್, ಗುತ್ತಿಗೆ, ಭದ್ರತಾ ಠೇವಣಿ, ಕಾರ್ಯಾದೇಶದಲ್ಲಿ ನ್ಯೂನತೆ ಆರೋಪ ಸಂಬಂಧ ವಾರದಲ್ಲಿ ವರದಿ ನೀಡುವಂತೆ ಜಿಬಿಎ ಆಯುಕ್ತರಿಗೆ ಸೂಚಿಸಿದ್ದರು. ಪ್ಯಾಕೇಜ್ 1, 2 ಮತ್ತು 5ರ ಟೆಂಡರ್‌ಗಳ ಕೂಲಂಕಷ ಪರಿಶೀಲನೆಗೆ ತಿಳಿಸಲಾಗಿದ್ದು, ಪ್ಯಾಕೇಜ್ 2, 5ನ್ನು ಮುನಿಯಪ್ಪ ಎಂಟರ್‌ಪ್ರೈಸಸ್‌ಗೆ ಗುತ್ತಿಗೆ ನೀಡಲಾಗಿತ್ತು. ಟೆಂಡರ್ ನಿಯಮ ಹಾಗೂ ಭದ್ರತಾ ಠೇವಣಿಯಲ್ಲಿ ವಿನಾಯಿತಿ ನೀಡಲಾಗಿದ್ದು, ಸುಮಾರು 150 ಕೋಟಿ ರೂ. ಸ್ವಚ್ಛ ಭಾರತ ನಿಧಿಯಲ್ಲೂ ದುರ್ಬಳಕೆ ಆರೋಪ ಕೇಳಿಬಂದಿದೆ. ಪ್ಯಾಕೇಜ್ 2 ಮತ್ತು 5 ಎಸ್‌ಟಿಎಸ್ ಸ್ಥಾಪನೆಗೆ ಕರೆದಿದ್ದ ಟೆಂಡರ್​​ನಲ್ಲಿ ಮುನಿಯಪ್ಪ ಎಂಟರ್‌ಪ್ರೈಸಸ್‌ ಭಾಗಿಯಾಗಿತ್ತು ಮತ್ತು ನಿಗದಿತ ಮೊತ್ತಕ್ಕಿಂತ ಕಡಿಮೆಗೆ ಬಿಡ್ ಸಲ್ಲಿಸಿತ್ತು. ಪ್ಯಾಕೇಜ್ 2ರ ಟೆಂಡರ್ ಮೊತ್ತ 53.4 ಕೋಟಿ ರೂಪಾಯಿ ಆದರೆ 33.63 ಕೋಟಿ ರೂಪಾಯಿಗೆ ಗುತ್ತಿಗೆ ನೀಡಲಾಗಿತ್ತು. ಪ್ಯಾಕೇಜ್ 5ರ ಟೆಂಡರ್ ಮೊತ್ತ 55.4 ಕೋಟಿ ರೂಪಾಯಿ ಆದರೆ ಇದನ್ನು 38.42 ಕೋಟಿ ರೂಪಾಯಿಗೆ ಟೆಂಡರ್ ನೀಡಲಾಗಿತ್ತು. ಹೀಗಾಗಿ ಟೆಂಡರ್ ಪ್ರಕ್ರಿಯೆಯಲ್ಲಿ ‌ದೊಡ್ಡ ಅಕ್ರಮ ನಡೆದಿದೆ ಎಂದು ಇಡಿಗೆ ದೂರು ಸಲ್ಲಿಕೆಯಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ವಿಕಾಸ್​ ಬಿಎಂ
ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More