ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ

| Updated By: ವಿವೇಕ ಬಿರಾದಾರ

Updated on: Jan 13, 2025 | 10:31 AM

ಬೆಂಗಳೂರಿನ ದಾಸರಹಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಏಳು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ನಾಗಸಂದ್ರದಲ್ಲಿನ ಆರ್.ಎ. ಫ್ಯಾಷನ್ ಗಾರ್ಮೆಂಟ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ. 40 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಬಟ್ಟೆಗಳು ಸುಟ್ಟುಹೋಗಿವೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು, ಜನವರಿ 13: ದಾಸರಹಳ್ಳಿಯ ಚೊಕ್ಕಸಂದ್ರದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು (Cylender Blast) ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದಿಜುಧಾರ್ (34), ಅಂಜಲಿದಾಸ್ (31), ಮನುಶ್ರೀ (3), ಮನು(25), ತಿಪ್ಪೇರುದ್ರಸ್ವಾಮಿ (50), ಪಕ್ಕದ ಮನೆ ಶೋಭ (60) ಮತ್ತು ಕರೀಬುಲ್ಲ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ದಿಜುಧಾರ್​ ಎಂಬುವರ ಮನೆಯಲ್ಲಿ ಗ್ಯಾಸ್​ ಸಿಲಿಂಡರ್​ ಸೋರಿಕೆಯಾಗಿ ಸ್ಫೋಟಗೊಂಡಿದೆ. ಸ್ಫೋಟದ ತೀರ್ವತೆಗೆ ಎದುರು ಮನೆಯವರಿಗೂ ಗಾಯವಾಗಿದೆ.

ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಾಗಸಂದ್ರದಲ್ಲಿನ ಆರ್​.ಎ.ಫ್ಯಾಷನ್ ಗಾರ್ಮೆಂಟ್ಸ್​ನಲ್ಲಿ​​ ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿ ಅವಘಡ ಸಂಭವಿಸಿದೆ. 40 ಲಕ್ಷ ರೂಪಾಯಿಗೂ ಹೆಚ್ಚು ಬೆಲೆಬಾಳುವ ಬಟ್ಟೆ ಸೇರಿದಂತೆ ಹಲವು ವಸ್ತುಗಳು ಸುಟ್ಟುಭಸ್ಮವಾಗಿವೆ. R.A.ಫ್ಯಾಷನ್ ಗಾರ್ಮೆಂಟ್ಸ್​​ ಅರುಣ್ ಮತ್ತು ಶಿವು ಎಂಬುವರಿಗೆ ಸೇರಿದೆ.

ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಘಟನೆ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Jan 13, 2025 10:30 AM