ಹೊಸ ವರ್ಷ ಸಂಭ್ರಮಾಚರಣೆಗೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತಾ ಕ್ರಮ? ಇಲ್ಲಿದೆ ನೋಡಿ

Updated on: Dec 30, 2025 | 12:25 PM

ಹೊಸ ವರ್ಷ 2026ರ ಸಂಭ್ರಮಾಚರಣೆಗೆ ಬೆಂಗಳೂರು ಸಿದ್ಧವಾಗುತ್ತಿರುವಾಗ, ಪಬ್‌ಗಳ ಸುರಕ್ಷತೆಯ ಕುರಿತು ಟಿವಿ9 ರಿಯಾಲಿಟಿ ಚೆಕ್ ನಡೆಸಿದೆ. ಗೋವಾದಲ್ಲಿ ನಡೆದ ಅನಾಹುತದ ಹಿನ್ನೆಲೆಯಲ್ಲಿ, ರಾಜಧಾನಿಯ ಪ್ರಮುಖ ಪಬ್‌ಗಳಲ್ಲಿ ಅಗ್ನಿಶಾಮಕ ಉಪಕರಣಗಳು, ಪ್ರವೇಶ-ನಿರ್ಗಮನ ಮಾರ್ಗಗಳ ಪರಿಶೀಲನೆ ನಡೆಸಲಾಯಿತು. ಕೆಲವೆಡೆ ಸುರಕ್ಷತಾ ನಿರ್ಲಕ್ಷ್ಯ ಕಂಡುಬಂದರೂ, ಕೆಲವು ಪಬ್‌ಗಳು ಮುನ್ನೆಚ್ಚರಿಕೆ ವಹಿಸಿರುವುದು ವರದಿಯಾಗಿದೆ.

ಬೆಂಗಳೂರು, ಡಿಸೆಂಬರ್ 30: ಹೊಸ ವರ್ಷ 2026ರ ಸ್ವಾಗತ ಹಾಗೂ ಸಂಭ್ರಮಾಚರಣೆಗೆ ಬೆಂಗಳೂರು ಸಜ್ಜಾಗುತ್ತಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಪಬ್‌ಗಳಲ್ಲಿ ಸಿದ್ಧತೆಗಳು ಬಿರುಸಾಗಿವೆ. ಆದರೆ, ಗೋವಾ ಪಬ್​ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದ ಹಿನ್ನೆಲೆಯಲ್ಲಿ, ಜನಸಂದಣಿ ಸೇರುವ ಸಂದರ್ಭಗಳಲ್ಲಿ ಪಬ್‌ಗಳಲ್ಲಿ ಸುರಕ್ಷತಾ ಕ್ರಮಗಳು ಎಷ್ಟು ಪರಿಣಾಮಕಾರಿಯಾಗಿವೆ ಎಂಬುದು ಪ್ರಮುಖ ಪ್ರಶ್ನೆಯಾಗಿದೆ. ಈ ಹಿನ್ನೆಲೆಯಲ್ಲಿ ‘ಟಿವಿ9’ ನಗರದ ವಿವಿಧ ಪಬ್‌ಗಳಲ್ಲಿ ರಿಯಾಲಿಟಿ ಚೆಕ್ ನಡೆಸಿದೆ.

ಚರ್ಚ್ ಸ್ಟ್ರೀಟ್, ಬ್ರಿಗೇಡ್ ರೋಡ್ ಮತ್ತು ಕೋರಮಂಗಲದಂತಹ ಪ್ರಮುಖ ಪಬ್ ವಲಯಗಳಲ್ಲಿ ರಿಯಾಲಿಟಿ ಚೆಕ್ ಮಾಡಲಾಗಿದ್ದು, ಅನೇಕ ಪಬ್‌ಗಳಲ್ಲಿ ಅಗ್ನಿಶಾಮಕ ಉಪಕರಣಗಳ ಅಳವಡಿಕೆ, ತುರ್ತು ನಿರ್ಗಮನ ಮಾರ್ಗಗಳ ಲಭ್ಯತೆ ಮತ್ತು ಅವುಗಳ ನಿರ್ವಹಣೆಯ ಕುರಿತು ಪರಿಶೀಲಿಸಲಾಯಿತು. ಕೆಲವು ಪಬ್‌ಗಳಲ್ಲಿ ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯ ಕಂಡುಬಂದಿದ್ದರೆ, ಇನ್ನು ಕೆಲವು ಪಬ್‌ಗಳು ಪೊಲೀಸ್ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಿ ಉತ್ತಮ ಸಿದ್ಧತೆಗಳನ್ನು ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ