ಪಂಚೆ ಹಾಕೊಂಡು ಬಂದಿದ್ದ ರೈತನನ್ನು ಒಳಗೆ ಬಿಡದ ಜಿಟಿ ಮಾಲ್ ಸಿಬ್ಬಂದಿ, ವಿಡಿಯೋ ನೋಡಿ

| Updated By: ರಮೇಶ್ ಬಿ. ಜವಳಗೇರಾ

Updated on: Jul 16, 2024 | 10:40 PM

ಕೊಳೆಯಾಗಿದೆ ಎಂಬ ಕಾರಣಕ್ಕೆ ರಾಜಾಜಿನಗರ ಮೆಟ್ರೋ ಸಿಬ್ಬಂದಿ ರೈತನನ್ನು ಒಳಗೆ ಬಿಡದೆ ದರ್ಪ ಮೆರೆದಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಇದೀಗ ಜಿಟಿ ಮಾಲ್ ಸಿಬ್ಬಂದಿ ಪಂಚೆ ಹಾಕೊಂಡು ಬಂದಿದ್ದ ರೈತನನ್ನು ತಡೆದಿರುವ ಘಟನೆ ನಡೆದಿದೆ.

ಬೆಂಗಳೂರು, (ಜುಲೈ 16): ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಒಳಗೆ ಬಿಡದ ಜಿಟಿ ಮಾಲ್ ಸಿಬ್ಬಂದಿ ದರ್ಪ ತೋರಿದ ಘಟನೆ ನಡೆದಿದೆ. ಹಾವೇರಿ ಮೂಲದ ನಾಗರಾಜ್ ಎನ್ನುವರು ಇಂದು (ಜುಲೈ 16) ತಮ್ಮ ತಂದೆ ತಾಯಿಗೆ ಸಿನಿಮಾ ತೋರಿಸಲು ಬೆಂಗಳೂರಿನ ಮಾಗಡಿ ರಸ್ತೆ ಜಿಟಿ ಮಾಲ್ ಕರೆದೊಯ್ದಿದ್ದಾರೆ. ಆದ್ರೆ, ನಾಗರಾಜ್ ತಮ್ಮ ತಂದೆ ಪಂಚೆ ಹಾಕಿಕೊಂಡು ತಲೆಗೆ ಪಟಗ ಸುತ್ತಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಅವರನ್ನು ಮಾಲ್​ ಒಳಗೆ ಪ್ರವೇಶಿಸಲು ನಿರಾಕರಿಸಿದ್ದಾರೆ. ಪುತ್ರ ನಾಗರಾಜ್ ಎಂಬುವರು ಒಳಗೆ ಬಿಡಿ ಎಂದು ಇಷ್ಟು ಬಾರಿ ಕೇಳಿದರು ಪಂಚೆ ಹಾಕೊಂಡಿದ್ದಾರೆ. ಮಾಲ್ ನಲ್ಲಿ ಪಂಚೆ ಹಾಕಿದವರನ್ನು ಬಿಡುವುದಿಲ್ಲ ಎಂದು ಸಿಬ್ಬಂದಿ ತಮ್ಮದೇ ಮೊಂಡು ವಾದ ಮಾಡಿದ್ದಾರೆ. ಅಲ್ಲದೇ ನಮ್ಮ ಮಾಲಿನಲ್ಲಿ ಈ ರೀತಿ ರೂಲ್ಸ್ ಇದೆ ಎಂದು ಪ್ರವೇಶ ದ್ವಾರದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಾಲ್ ಮುಂದೆ ಕೂರಿಸಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಮಾನವೀಯತೆ ಮರೆತು ಬಿಟ್ರಾ ನಮ್ಮ‌ ಮೆಟ್ರೋ ಸಿಬ್ಬಂದಿ? ಬಟ್ಟೆ ಕೊಳೆಯಿದೆ ಎಂದು ಒಳಗೆ ಬಿಡದೆ ರೈತನಿಗೆ ಅವಮಾನ

ಬಟ್ಟೆ ಕ್ಲೀನ್ ಇಲ್ಲ ಎಂಬ ಕಾರಣಕ್ಕೆ ರೈತನನ್ನ ಇತ್ತೀಚೆಗೆ ಬೆಂಗಳೂರು ನಮ್ಮ ಮೆಟ್ರೋ ಮೆಟ್ರೋ ಒಳಗೆ ಬಿಡದೆ ಅವಮಾನಿಸಲಾಗಿತ್ತು. ಮೆಟ್ರೋ ಸಿಬ್ಬಂದಿಯ ದುರಹಂಕಾರದ ವಿಡಿಯೋ ಭಾರೀ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸಿಬ್ಬಂದಿಯನ್ನು ನಮ್ಮ ಮೆಟ್ರೋ ಅಮಾನತು ಮಾಡಿತ್ತು. ಇದರ ಬೆನ್ನಲ್ಲೇ  ಬೆಂಗಳೂರಿನಲ್ಲಿ ಜಿಟಿ ಮಾಲ್ ಸಿಬ್ಬಂದಿ ಸಹ ರೈತನನ್ನು ಒಳಗೆ ಬಿಡದೇ ಅವಮಾನಿಸಿದ್ದಾನೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on