AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!

ಗಂಗಾಧರ​ ಬ. ಸಾಬೋಜಿ
|

Updated on: May 21, 2026 | 8:58 PM

Share

ಬೆಂಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಲಾಲ್‌ಬಾಗ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಅಬ್ಬರಿಸಿದೆ. ಧಾರಾಕಾರ ಮಳೆಯಿಂದಾಗಿ ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿ ದ್ವಿಚಕ್ರ ವಾಹನ ಸವಾರರು ಪರದಾಡಿದ್ದಾರೆ. ರಾಜಾಜಿನಗರದಲ್ಲಿ ಬೃಹತ್ ಮರ ಉರುಳಿ ಕಾರು ಮತ್ತು ಬೈಕ್‌ಗಳು ಜಖಂಗೊಂಡಿವೆ.

ಬೆಂಗಳೂರು, ಮೇ 21: ಸಂಜೆ ಆಗ್ತಿದ್ದಂತೆ ಬೆಂಗಳೂರಿಗೆ ಮಳೆರಾಯ ಕಾಲಿಟ್ಟಿದ್ದ. ಇದೇ ಮಳೆ ಹತ್ತಾರು ಅವಾಂತರ ಸೃಷ್ಟಿಸಿದೆ. ಮರಗಳನ್ನ ಧರೆಗುರುಳಿಸಿ ವಾಹನಗಳನ್ನ ಜಖಂಗೊಳಿಸಿದೆ. ಭಾರೀ ಮಳೆಯಿಂದಾಗಿ ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿತ್ತು. ದ್ವಿಚಕ್ರ ವಾಹನ ಸವಾರರು ರಸ್ತೆಗಳಲ್ಲಿ ಪರದಾಡುವಂತಾಯಿತು. ರಾಜಾಜಿನಗರದಲ್ಲಿ ಬೃಹದಾಕಾರದ ಮರವೊಂದು ಉರುಳಿ ಬಿದ್ದು, ಕಾರು ಮತ್ತು ಬೈಕ್‌ಗಳು ಜಖಂಗೊಂಡಿವೆ. ರಾಜಾಜಿನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿ ಬೃಹತ್ ಮರ ಧರೆಗೆ ಉರುಳಿತ್ತು. ಇದ್ರಿಂದ ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವರದರಾಜಸ್ವಾಮಿ ದೇಗುಲದಲ್ಲಿದ್ದ ಮರ ದೇಗುಲದ ಮೇಲ್ಚಾವಣಿ ಮೇಲೆ ಬಿದ್ದಿದೆ. ಇನ್ನು ಪುಲಿಕೇಶಿನಗರದ ಮುಖ್ಯ ರಸ್ತೆಯಲ್ಲೂ ಮರ ಉರುಳಿ ಬಿದ್ದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us