AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡ್‌ನಲ್ಲಿ ಫುಲ್ ಟ್ರಾಫಿಕ್ ಜಾಮ್

ಬೆಂಗಳೂರು: ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡ್‌ನಲ್ಲಿ ಫುಲ್ ಟ್ರಾಫಿಕ್ ಜಾಮ್

ಜಗದೀಶ ಬಿ.
| Edited By: |

Updated on: Sep 20, 2024 | 1:04 PM

Share

ಬೃಹತ್ ಲಾರಿಯೊಂದು ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಬೆಂಗಳೂರಿನ ಹೊರ ವರ್ತುಲ ರಸ್ತೆಯ ನಾಗವಾರ-ಹೆಬ್ಬಾಳ ಮಾರ್ಗ ಮಧ್ಯೆ ಕೆಂಪಾಪುರದ ಬಳಿ ಶುಕ್ರವಾರ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಸದ್ಯ ಲಾರಿಯನ್ನು ತೆರೆವುಗೊಳಿಸಲಾಗಿದೆ. ಅದೃಷ್ಟವಶಾತ್, ಅಪಘಾತದಿಂದಾಗಿ ಪ್ರಾಣಹಾನಿ ಸಂಭವಿಸಿಲ್ಲ.

ಬೆಂಗಳೂರು, ಸೆಪ್ಟೆಂಬರ್ 20: ಬೆಂಗಳೂರಿನ ಔಟರ್​ ರಿಂಗ್ ರಸ್ತೆಯಲ್ಲಿ 10 ಚಕ್ರದ ಲಾರಿ ಅಪಘಾತಕ್ಕೀಡಾಗಿ ಅಡ್ಡಲಾಗಿ ಬಿದ್ದ ಕಾರಣ ಶುಕ್ರವಾರ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ನಾಗವಾರ-ಹೆಬ್ಬಾಳ ಮಾರ್ಗದ ಕೆಂಪಾಪುರದ ಬಳಿ ಲಾರಿ ನಿಯಂತ್ರಣ ತಪ್ಪಿ ಮೆಟ್ರೋ ಕಾಮಗಾರಿ ಕಾಂಪೌಂಡ್​ಗೆ ಡಿಕ್ಕಿಯಾಗಿ ಅಡ್ಡಲಾಗಿ ಬಿದ್ದಿದೆ.

ಲಾರಿ ಅಪಘಾತದ ಕಾರಣ ಕೆಲಕಾಲ ಕಿಲೋಮೀಟರ್​ವರೆಗೆ ಟ್ರಾಫಿಕ್ ಜಾಮ್ ಆಗಿತ್ತು. ನಂತರ ಸಂಚಾರಿ ಪೊಲೀಸರು ಜೆಸಿಬಿ ಮೂಲಕ ಲಾರಿ ತೆರವು ಮಾಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More