ಬೆಂಗಳೂರಿನಾದ್ಯಂತ ವರುಣಾರ್ಭಟ: ರಾತ್ರಿ ಮಳೆಗೆ ರಸ್ತೆಗಳು ಜಲಾವೃತ, ಎಲ್ಲೆಡೆ ಟ್ರಾಫಿಕ್
ಬೆಂಗಳೂರು ನಗರದಲ್ಲಿ ಮತ್ತೆ ಧಾರಾಕಾರ ಮಳೆ ಶುರುವಾಗಿದ್ದು, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್, ಶಾಂತಿನಗರ ಸೇರಿದಂತೆ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುತ್ತಿದ್ದರೆ, ಕೆ.ಆರ್.ಮಾರ್ಕೆಟ್‌ನಲ್ಲಿ ವ್ಯಾಪಾರಿಗಳು ಮಳೆಯಲ್ಲೇ ಛತ್ರಿ ಹಿಡಿದು ವ್ಯಾಪಾರ ಮಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸಾರ್ವಜನಿಕರಿಗೆ ಮಳೆಯಿಂದಾಗಿ ತೀವ್ರ ಸಂಕಷ್ಟ ಎದುರಾಗಿದೆ.
ಬೆಂಗಳೂರು, ಅಕ್ಟೋಬರ್ 05: ಬೆಂಗಳೂರಿನಾದ್ಯಂತ ಧಾರಾಕಾರ ಮಳೆ ಸುರಿದಿದೆ. ಸಾರ್ವಜನಿಕರು ಮತ್ತು ವಾಹನ ಸವಾರರು ತೀವ್ರ ಪರದಾಡಿದ್ದಾರೆ. ನಗರದ ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ಕಾರ್ಪೊರೇಷನ್, ಕೆ.ಆರ್. ಮಾರ್ಕೆಟ್, ಶಾಂತಿನಗರ ಹಾಗೂ ಆನೇಕಲ್ ತಾಲೂಕಿನ ಅತ್ತಿಬೆಲೆ, ಚಂದಾಪುರ, ಜಿಗಣಿ ಸೇರಿದಂತೆ ಹಲವೆಡೆ ಜೋರು ಮಳೆ ಸುರಿದೆ. ಪ್ರಮುಖವಾಗಿ ಕೆ.ಆರ್. ಮಾರ್ಕೆಟ್ ಪ್ರದೇಶದ ರಸ್ತೆಗಳಲ್ಲಿ ಮಳೆ ನೀರು ಉಕ್ಕಿ ಹರಿದಿದೆ. ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿರುವುದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
