AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ

ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ

ಶಿವಪ್ರಸಾದ್​ ಬಿ.
| Edited By: |

Updated on:Sep 29, 2026 | 7:14 AM

Share

Bangalore Rains: ಬೆಂಗಳೂರಿನಲ್ಲಿ ರಾತ್ರಿಯಿಡೀ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಮಲ್ಲೇಶ್ವರಂನಲ್ಲಿ ಬೃಹತ್ ಮರ ರಸ್ತೆಗೆ ಉರುಳಿಬಿದ್ದು, ಎರಡು ಕಾರುಗಳು ಜಖಂ ಆಗಿವೆ. ನಗರದ ಹಲವೆಡೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡಿದ್ದಾರೆ. ವೈಟ್‌ಫೀಲ್ಡ್ ಮತ್ತು ಮಾರತ್ತಹಳ್ಳಿ ಸೇರಿದಂತೆ ವಿವಿಧೆಡೆ ಟ್ರಾಫಿಕ್ ಜಾಮ್ ಉಂಟಾಗಿ, ಜನಜೀವನ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರು, ಸೆಪ್ಟೆಂಬರ್ 29: ಬೆಂಗಳೂರು ನಗರದಲ್ಲಿ ರಾತ್ರಿಯಿಡೀ ಗುಡುಗು ಸಹಿತ ಭಾರಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲ್ಲೇಶ್ವರಂ, ಬಸವನಗುಡಿ, ಟೌನ್ ಹಾಲ್, ಅಂಜನಾಪುರ, ಗೊಟ್ಟಿಗೆರೆ, ಆವಲಹಳ್ಳಿ ಮತ್ತು ಬನಶಂಕರಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ದಾಖಲಾಗಿದೆ. ಮಲ್ಲೇಶ್ವರಂನಲ್ಲಿ ಭಾರಿ ಮಳೆಯಿಂದಾಗಿ ಬೃಹತ್ ಮರ ರಸ್ತೆಗೆ ಧರೆಗುರುಳಿದೆ. ಪರಿಣಾಮವಾಗಿ, ಪಾರ್ಕ್ ಮಾಡಲಾಗಿದ್ದ ಎರಡು ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಬೆಳಗಾದರೂ ಕೂಡ ಮರ ತೆರವು ಕಾರ್ಯ ಮುಗಿದಿಲ್ಲ. ಈ ಘಟನೆಯಿಂದಾಗಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಅದೃಷ್ಟವಶಾತ್, ಕ್ಯಾಬ್ ಚಾಲಕ ಮತ್ತು ಮಾಲೀಕ ವಿನೋದ್ ಕೂದಲೆಳೆ ಅಂತರಲ್ಲಿ ಪಾರಾಗಿದ್ದಾರೆ. ವಿನೋದ್ ಪ್ರತಿದಿನ ಕ್ಯಾಬ್ ರಸ್ತೆ ಬದಿ ನಿಲ್ಲಿಸಿ ಕ್ಯಾಬ್ ನಲ್ಲಿ ಮಲಗುತ್ತಿದ್ದರು. ಅಂತೆಯೇ ಸೋಮವಾರವೂ ಕ್ಯಾಬ್ ನಿಲ್ಲಿಸಿ ಅದರಲ್ಲಿ ಮಲಗಿದ್ದರು. ಅದೃಷ್ಟವಶಾತ್, ಅವಘಡದಿಂದ ಪಾರಾಗಿದ್ದಾರೆ.

ಮಳೆಯ ಆರ್ಭಟಕ್ಕೆ ನಗರದ ಬಹುತೇಕ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ತೀವ್ರ ಪರದಾಡಿದ್ದಾರೆ. ವೈಟ್‌ಫೀಲ್ಡ್ ಮತ್ತು ಮಾರತ್ತಹಳ್ಳಿ ಭಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಕಿಲೋಮೀಟರ್‌ಗಟ್ಟಲೆ ವಾಹನಗಳು ನಿಂತಿವೆ. ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗಿದ್ದು, ಕಸಕಡ್ಡಿಗಳು ಸಿಲುಕಿ ನೀರು ಸರಾಗವಾಗಿ ಹರಿಯಲು ಅಡ್ಡಿಯಾಗಿದೆ. ರಸ್ತೆಗಳ ದುಸ್ಥಿತಿ, ಗುಂಡಿಗಳು ಮತ್ತು ಕಸದ ನಿರ್ವಹಣಾ ಸಮಸ್ಯೆಗಳು ಮಳೆಯ ಅವಾಂತರವನ್ನು ಮತ್ತಷ್ಟು ಹೆಚ್ಚಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 29, 2026 07:10 AM

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More