ದೆಹಲಿ ಬೆನ್ನಲ್ಲೇ ಬೆಂಗಳೂರಿನಲ್ಲೂ ಪ್ರತಿಭಟನೆ ಕಾವು: ವಕೀಲರ ಸಂಘದಿಂದ ಭಾರೀ ಪ್ರತಿಭಟನೆ
ಬೆಂಗಳೂರು ವಕೀಲರ ಸಂಘವು ಬುಧವಾರ ಕರ್ನಾಟಕ ಹೈಕೋರ್ಟ್ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಮೂಲಭೂತ ಸೌಕರ್ಯಗಳ ಕೊರತೆ, ನ್ಯಾಯಾಂಗದಲ್ಲಿ ಖಾಲಿ ಹುದ್ದೆಗಳು ಮತ್ತು ಕೆಲವು ನ್ಯಾಯಮೂರ್ತಿಗಳ ಅಗೌರವಯುತ ವರ್ತನೆಯಿಂದ ವಕೀಲರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಹೇಳಿದ್ದಾರೆ. ಮುಖ್ಯ ನ್ಯಾಯಮೂರ್ತಿಗಳ ನಿಷ್ಕ್ರಿಯತೆ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಬೆಂಗಳೂರು, ಜುಲೈ 22: ಮೂಲಭೂತ ಸೌಕರ್ಯಗಳ ಕೊರತೆ ಮತ್ತು ನ್ಯಾಯಾಂಗದಲ್ಲಿನ ಸಮಸ್ಯೆಗಳನ್ನು ವಿರೋಧಿಸಿ ಬೆಂಗಳೂರಿನ ಹೈಕೋರ್ಟ್ ಆವರಣದಲ್ಲಿ ವಕೀಲರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಮಾತನಾಡಿ, ವಕೀಲರಿಗೆ ಶೌಚಾಲಯ, ಲಿಫ್ಟ್ ಮತ್ತು ಪಾರ್ಕಿಂಗ್‌ನಂತಹ ಮೂಲಭೂತ ಸೌಲಭ್ಯಗಳೂ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಇಡೀ ಏಷ್ಯಾದಲ್ಲೇ ಅತಿದೊಡ್ಡ ವಕೀಲರ ಸಂಘಕ್ಕೆ ಕನಿಷ್ಠ ಸೌಲಭ್ಯಗಳಿಗಾಗಿ ಪ್ರತಿಭಟಿಸುವುದು ನಿಜಕ್ಕೂ ಹಾಸ್ಯಾಸ್ಪದ’ ಎಂದು ಸುಬ್ಬಾರೆಡ್ಡಿ ಹೇಳಿದ್ದಾರೆ.
ಮ್ಯಾಜಿಸ್ಟ್ರೇಟ್ ಕೋರ್ಟ್‌ನ ಏಳು ಅಂತಸ್ತಿನ ಕಟ್ಟಡದಲ್ಲಿ ಕೇವಲ ಒಂದೇ ಲಿಫ್ಟ್ ಇರುವುದರಿಂದ ಹಿರಿಯ ವಕೀಲರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಿವಿಲ್ ಕೋರ್ಟ್‌ಗಳಲ್ಲಿ 100ರಲ್ಲಿ 25 ನ್ಯಾಯಾಲಯಗಳು ಖಾಲಿ ಇದ್ದು, ಇದರಿಂದ ಉಳಿದ ನ್ಯಾಯಮೂರ್ತಿಗಳ ಮೇಲೆ ಕೆಲಸದ ಒತ್ತಡ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ. ಪ್ರಧಾನ ನ್ಯಾಯಮೂರ್ತಿಗಳಿಗೆ ಈ ಸಮಸ್ಯೆಗಳ ಕುರಿತು ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಯಾವುದೇ ಸ್ಪಂದನೆ ದೊರೆತಿಲ್ಲ. ಈ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ವಕೀಲರ ಸಂಘವು ಸರ್ಕಾರ ಮತ್ತು ನ್ಯಾಯಾಂಗ ಇಲಾಖೆಯನ್ನು ಒತ್ತಾಯಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

