ಭಾರಿ ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು! ಮೈ ಜುಮ್ಮೆನ್ನಿಸುವ ವಿಡಿಯೋ ಇಲ್ಲಿದೆ ನೋಡಿ
ಬೈಕ್ ಸವಾರರು ರಸ್ತೆ ಗುಂಡಿಯಿಂದಾಗಿ ಬೈಕ್ ಸಮೇತ ಕೆಳಗೆ ಬಿದ್ದರೂ ಭಾರಿ ಗಾತ್ರದ ಲಾರಿ ಅಡಿ ಬೀಳುವುದರಿಂದ ಬಚಾವಾದ ಸಿನಿಮೀಯ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಳೆ ಚಂದಾಪುರದ ನೆರಳೂರು ಸಮೀಪ ನಡೆದಿದೆ. ಘಟನೆಯ ಮೈಜುಮ್ಮೆನಿಸುವ ವಿಡಿಯೋ ಕಾರೊಂದರ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.
ಆನೇಕಲ್, ಡಿಸೆಂಬರ್ 12: ಹೆದ್ದಾರಿಯ ಗುಂಡಿಗೆ ಬಿದ್ದ ಬೈಕ್ ಸವಾರರು ಸಾವಿನ ದವಡೆಯಿಂದ ಸ್ವಲ್ಪದರಲ್ಲೇ ಪಾರಾದ ದೃಶ್ಯ ಕಾರಿನ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಳೆ ಚಂದಾಪುರದ ನೆರಳೂರು ಸಮೀಪ ಬೈಕ್ ಸವಾರರು ರಸ್ತೆ ಗುಂಡಿಯಿಂದಾಗಿ ಬೈಕ್ನಿಂದ ಆಯತಪ್ಪಿ ಬಿದ್ದಿದ್ದಾರೆ. ಇನ್ನೇನು ಪಕ್ಕದಲ್ಲಿ ಚಲಿಸುತ್ತಿದ್ದ ಬೃಹತ್ ಗಾತ್ರದ ಕಂಟೇನರ್ ಲಾರಿ ಅವರ ತಲೆಮೇಲೆ ಹರಿಯುವುದರಲ್ಲಿತ್ತು. ಲಾರಿ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಬೆಂಗಳೂರು-ಹೊಸೂರು ಹೆದ್ದಾರಿ ರಸ್ತೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ನಿತ್ಯ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಹೆದ್ದಾರಿ ರಸ್ತೆಯೂ ಗುಂಡಿಗಳಿಂದ ಕೂಡಿದ್ದು ನಿತ್ಯ ಅಪಘಾತ ಸಂಭವಿಸುತ್ತಿದೆ. ಎರಡು ತಿಂಗಳಿನ ಹಿಂದೆ ಸಂಸದ ಡಾ.ಸಿ.ಎನ್ ಮಂಜುನಾಥ್ ನೇತೃತ್ವದ ತಂಡ ಇಲ್ಲಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿತ್ತು. ಆದರೂ ಕಾಮಗಾರಿ ಚುರುಕುಗೊಂಡಿಲ್ಲ. ಯಮಸ್ವರೂಪಿ ರಸ್ತೆ ನಿತ್ಯ ವಾಹನ ಸವಾರರಿಗೆ ಕಂಟಕವಾಗಿ ಪರಿಣಮಿಸಿದೆ.
