AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು- ಹೊಸೂರು ಹೆದ್ದಾರಿಯಲ್ಲಿ ಫುಲ್‌ ಟ್ರಾಫಿಕ್ ಜಾಮ್!

ಬೆಂಗಳೂರು- ಹೊಸೂರು ಹೆದ್ದಾರಿಯಲ್ಲಿ ಫುಲ್‌ ಟ್ರಾಫಿಕ್ ಜಾಮ್!

ರಾಮು, ಆನೇಕಲ್​
| Edited By: |

Updated on: Oct 05, 2026 | 12:06 PM

Share

ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ನಿತ್ಯ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಚಂದಾಪುರದಿಂದ ಅತ್ತಿಬೆಲೆವರೆಗೆ ವಾಹನ ಸವಾರರು ಪ್ರತಿದಿನವೂ ಕಿರಿಕಿರಿ ಅನುಭವಿಸುತ್ತಿದ್ದಾರೆ. ಹೆದ್ದಾರಿ ಪ್ರಾಧಿಕಾರದ ಯಡವಟ್ಟು ಹಾಗೂ ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಮುಖ್ಯ ಕಾರಣವಾಗಿದೆ. ಕಿರಿದಾದ ಹೆದ್ದಾರಿ ಮತ್ತು ಸರ್ವೀಸ್ ರಸ್ತೆಗಳು ಸಂಚಾರ ದಟ್ಟಣೆಯನ್ನು ಮತ್ತಷ್ಟು ಉಲ್ಬಣಗೊಳಿಸಿ, ಬೊಮ್ಮಸಂದ್ರದಿಂದ ಅತ್ತಿಬೆಲೆವರೆಗೆ ಪ್ರಯಾಣಿಸುವವರಿಗೆ ನಿರಂತರ ಸಮಸ್ಯೆಯಾಗಿದೆ.

ಬೆಂಗಳೂರು, ಅಕ್ಟೋಬರ್ 05: ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ನಿತ್ಯವೂ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ವಾಹನ ಸವಾರರು ತೀವ್ರ ಸಂಚಾರ ದಟ್ಟಣೆಗೆ ಸಿಲುಕಿ ಪರದಾಡುವಂತಾಗಿದೆ. ಆನೇಕಲ್ ಪ್ರದೇಶದ ಬೆಂಗಳೂರು-ಹೊಸೂರು ಹೆದ್ದಾರಿಯ ಚಂದಾಪುರದಿಂದ ಅತ್ತಿಬೆಲೆವರೆಗಿನ ಮಾರ್ಗದಲ್ಲಿ ಈ ಸಮಸ್ಯೆ ಹೆಚ್ಚು ಕಂಡುಬರುತ್ತಿದೆ. ಪ್ರತಿದಿನವೂ ಸಾವಿರಾರು ಪ್ರಯಾಣಿಕರು ಮತ್ತು ವಾಹನಗಳು ಈ ಟ್ರಾಫಿಕ್ ಬಿಸಿ ತಟ್ಟಿದ ಪರಿಣಾಮವಾಗಿ ನರಕದರ್ಶನ ಅನುಭವಿಸುತ್ತಿದ್ದಾರೆ.

ಈ ನಿರಂತರ ಟ್ರಾಫಿಕ್ ಜಾಮ್‌ಗೆ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯೇ ಮುಖ್ಯ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೆದ್ದಾರಿ ಮತ್ತು ಸರ್ವೀಸ್ ರಸ್ತೆಗಳು ಅಗದಿರುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಇದು ಟ್ರಾಫಿಕ್ ದಟ್ಟಣೆಯನ್ನು ಮತ್ತಷ್ಟು ಉಲ್ಬಣಗೊಳಿಸಿದೆ. ಅಲ್ಲದೆ, ಅವೈಜ್ಞಾನಿಕವಾಗಿ ನಿರ್ಮಿಸಲಾದ ಹೆದ್ದಾರಿ ಕಾಮಗಾರಿಯಿಂದಾಗಿ ನಿತ್ಯವೂ ಟ್ರಾಫಿಕ್ ಕಿರಿಕಿರಿ ಸಾಮಾನ್ಯವಾಗಿದೆ.

ಬೊಮ್ಮಸಂದ್ರದಿಂದ ಅತ್ತಿಬೆಲೆವರೆಗೆ ಸಂಚರಿಸುವವರಿಗೆ ಈ ಸಮಸ್ಯೆ ದೈನಂದಿನ ಸಮಸ್ಯೆಯಾಗಿ ಮಾರ್ಪಟ್ಟಿದೆ. ಕಚೇರಿಗೆ ತೆರಳುವವರು, ವಿದ್ಯಾರ್ಥಿಗಳು ಮತ್ತು ಸರಕು ಸಾಗಣೆ ವಾಹನಗಳು ಈ ಟ್ರಾಫಿಕ್‌ನಿಂದಾಗಿ ಸಮಯಕ್ಕೆ ಸರಿಯಾಗಿ ತಲುಪಲು ಸಾಧ್ಯವಾಗದೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹೆದ್ದಾರಿ ಪ್ರಾಧಿಕಾರವು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More