ಧಾರಾಕಾರ ಮಳೆಗೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ

Updated By: ಪ್ರಸನ್ನ ಹೆಗಡೆ

Updated on: Oct 03, 2025 | 10:40 PM

ಸಂಜೆ ಹೊತ್ತಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ವೀರಸಂದ್ರ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ಪ್ರತಿ ಬಾರಿ ಮಳೆ ಬಂದಾಗ ಈ ರಸ್ತೆ ಜಲಾವೃತವಾಗಲಿದ್ದು,  ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಮಾಡದ ಕಾರಣ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಕಿಡಿ ಕಾರಿದ್ದಾರೆ.

ಆನೇಕಲ್​, ಅಕ್ಟೋಬರ್​ 03: ಸಂಜೆ ಸುರಿದ ಧಾರಾಕಾರ ಮಳೆಗೆ (Rain) ವೀರಸಂದ್ರ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ರಸ್ತೆಯಲ್ಲಿ ನೀರುನಿಂತ ಪರಿಣಾಮ ಕೆರೆಯಂತೆ ಮಾರ್ಪಟ್ಟಿದ್ದು, ಸಂಚರಿಸಲಾಗದೆ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಪ್ರತಿ ಬಾರಿ ಮಳೆ ಬಂದಾಗ ಈ ರಸ್ತೆ ಜಲಾವೃತವಾಗಲಿದ್ದು, ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಮಾಡದ ಕಾರಣ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಕಿಡಿ ಕಾರಿದ್ದಾರೆ. ವಾಹನಗಳು ಸಂಚರಿಸಲಾಗದ ಕಾರಣ, ಹೆದ್ದಾರಿಯಲ್ಲಿ ಕಿಲೋಮೀಟರ್​ ಗಟ್ಟಲೆ ಟ್ರಾಫಿಕ್​ ಕಂಡುಬಂತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.