AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಹುತೇಕ ಹೋಟೆಲ್​ಗಳು​​ ಬಂದ್​​​ ಸಾಧ್ಯತೆ: ಮಾಲೀಕರ ಸಂಘ ಹೇಳಿದ್ದೇನು ನೋಡಿ

ಬೆಂಗಳೂರಿನಲ್ಲಿ ಬಹುತೇಕ ಹೋಟೆಲ್​ಗಳು​​ ಬಂದ್​​​ ಸಾಧ್ಯತೆ: ಮಾಲೀಕರ ಸಂಘ ಹೇಳಿದ್ದೇನು ನೋಡಿ

ಗಣಪತಿ ಶರ್ಮಾ
|

Updated on: Mar 10, 2026 | 7:35 AM

Share

ಇರಾನ್, ಇಸ್ರೇಲ್ ಯುದ್ಧದ ಪರಿಣಾಮವಾಗಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಬೆಂಗಳೂರು ಹೋಟೆಲ್‌ಗಳನ್ನು ಸಂಕಷ್ಟಕ್ಕೆ ದೂಡಿದೆ. ಪೂರೈಕೆ ಸ್ಥಗಿತಗೊಂಡಿರುವುದರಿಂದ, ಇಂದು (ಮಾರ್ಚ್ 10) ಬಹುತೇಕ ಹೋಟೆಲ್‌ಗಳು ಬಂದ್ ಆಗುವ ಸಾಧ್ಯತೆಯಿದೆ. ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪರಿಹಾರ ಕಂಡುಕೊಳ್ಳಲು ಒತ್ತಾಯಿಸಿದ್ದಾರೆ.

ಬೆಂಗಳೂರು, ಮಾರ್ಚ್ 10: ಅಮೆರಿಕ, ಇರಾನ್ ಹಾಗೂ ಇಸ್ರೇಲ್ ಯುದ್ಧದ ಪರಿಣಾಮವಾಗಿ ಎಲ್ಪಿಜಿ ಸಿಲಿಂಡರ್‌ಗಳ ಕೊರತೆ ಬೆಂಗಳೂರಿನ ಹೋಟೆಲ್‌ಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ಏಕಾಏಕಿ ಸ್ಥಗಿತಗೊಂಡಿದ್ದು, ಮಾರ್ಚ್ 10 ರಂದು ನಗರದ ಹಲವು ಹೋಟೆಲ್‌ಗಳು ಮುಚ್ಚುವ ಸಾಧ್ಯತೆ ದಟ್ಟವಾಗಿದೆ. ಎಲ್ಪಿಜಿ ಕೊರತೆಯಿಂದಾಗಿ ಹೋಟೆಲ್‌ಗಳಲ್ಲಿ ಕಾಫಿ, ಟೀ, ಉಪಹಾರ ಮತ್ತು ಊಟ ಲಭ್ಯವಾಗುವುದು ಅನುಮಾನ ಎಂದು ಹೋಟೆಲ್ ಮಾಲೀಕರು ತಿಳಿಸಿದ್ದಾರೆ.

ಗ್ಯಾಸ್ ಸಿಲಿಂಡರ್ ಇಲ್ಲದೆ ಹೋಟೆಲ್ ನಡೆಸಲು ಅಸಾಧ್ಯ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ಹೇಳಿದ್ದಾರೆ. ಕೇಂದ್ರ ಸರ್ಕಾರವು 60-70 ದಿನಗಳ ಸ್ಟಾಕ್ ಇದೆ ಎಂದು ಈ ಹಿಂದೆ ಹೇಳಿದ್ದರೂ, ವಾಣಿಜ್ಯ ಗ್ಯಾಸ್ ಪೂರೈಕೆ ನಿಲ್ಲಿಸಿರುವುದು ಆತಂಕ ಮೂಡಿಸಿದೆ. ರಾಜ್ಯ ಸರ್ಕಾರವು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಮೇಲೆ ಒತ್ತಡ ಹೇರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ರಾವ್ ಆಗ್ರಹಿಸಿದ್ದಾರೆ.

ವರದಿ: ನಟರಾಜ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us