AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!

ಬೆಂಗಳೂರಿನಲ್ಲಿ ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Apr 18, 2026 | 10:03 PM

Share

ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಯುವಕನೊಬ್ಬ ಹೆಲ್ಮೆಟ್ ಬದಲಿಗೆ ಬಾಂಡ್ಲಿ ಧರಿಸಿ ಬೈಕ್ ಸವಾರಿ ಮಾಡಿದ್ದು ವೈರಲ್ ಆಗಿದೆ. ಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಅಥವಾ ಟ್ರೋಲ್ ಆಗಲು ಮಾಡಿದ ಈ ಹುಚ್ಚಾಟ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. "ಪೀಕ್ ಬೆಂಗಳೂರು ಮೊಮೆಂಟ್" ಎಂದು ಕರೆಸಿಕೊಂಡ ಈ ವಿಲಕ್ಷಣ ಘಟನೆ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನೆಟ್ಟಿಗರು ಯುವಕನ ನಡತೆಯನ್ನು ಖಂಡಿಸಿದ್ದಾರೆ.

ಬೆಂಗಳೂರು, ಏ.18: ಸಿಲಿಕಾನ್ ಸಿಟಿಯ ಟ್ರಾಫಿಕ್ ನಡುವೆ ವಿಲಕ್ಷಣ ಘಟನೆಗಳಿಗೇನೂ ಕೊರತೆಯಿಲ್ಲ. ಆದರೆ ಈಗ ಹೊರರಾಜ್ಯದ ಯುವಕನೊಬ್ಬ ಮಾಡಿರುವ ‘ಹುಚ್ಚಾಟ’ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಟ್ರಾಫಿಕ್ ಪೊಲೀಸರ ದಂಡದಿಂದ ತಪ್ಪಿಸಿಕೊಳ್ಳಲು ಅಥವಾ ಟ್ರೋಲ್ ಆಗಲು ಈ ಯುವಕ ಹೆಲ್ಮೆಟ್ ಬದಲಿಗೆ ಅಡುಗೆ ಮನೆಯಲ್ಲಿ ಬಳಸುವ ಬಾಂಡ್ಲಿಯನ್ನು (Frying Pan) ತಲೆ ಮೇಲೆ ಇಟ್ಟುಕೊಂಡು ಬೈಕ್ ಸವಾರಿ ಮಾಡಿದ್ದಾನೆ. ಬೆಂಗಳೂರಿನ ಎಚ್.ಎಸ್.ಆರ್ ಲೇಔಟ್ (HSR Layout) ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ರೂಪೇನಾ ಅಗ್ರಹಾರ ಬಳಿ ಈ ಘಟನೆ ನಡೆದಿದೆ. ಕೆಎಲ್ 59 ಪಿ 7471 (KL 59 P 7471) ನೋಂದಣಿ ಸಂಖ್ಯೆಯ ಪಲ್ಸರ್ ಬೈಕ್‌ನಲ್ಲಿ ಕೇರಳ ಮೂಲದ ಯುವಕರು ಈ ಸಾಹಸ ಮಾಡಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಸವಾರ ಹೆಲ್ಮೆಟ್ ಧರಿಸಿದ್ದರೂ, ಹಿಂಬದಿ ಕುಳಿತಿದ್ದ ಯುವಕ ಕೈಯಿಂದ ಬಾಂಡ್ಲಿಯನ್ನು ತಲೆ ಮೇಲೆ ಹಿಡಿದುಕೊಂಡಿದ್ದ. ದೂರದಿಂದ ನೋಡಿದರೆ ಅದು ಕಪ್ಪು ಬಣ್ಣದ ಹೆಲ್ಮೆಟ್‌ನಂತೆಯೇ ಭಾಸವಾಗುತ್ತಿತ್ತು. ಇತರ ವಾಹನ ಸವಾರರು ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. “ಪೀಕ್ ಬೆಂಗಳೂರು ಮೊಮೆಂಟ್” (Peak Bengaluru Moment) ಎಂಬ ಶೀರ್ಷಿಕೆಯಡಿ ಈ ವಿಡಿಯೋ ಸಖತ್ ವೈರಲ್ ಆಗಿದೆ. “ಬಾಂಡ್ಲಿ ಆಮ್ಲೆಟ್ ಹಾಕಲು ಕೆಲಸಕ್ಕೆ ಬರುತ್ತದೆಯೇ ಹೊರತು, ಅಪಘಾತವಾದಾಗ ತಲೆ ಉಳಿಸುವುದಿಲ್ಲ” ಎಂದು ನೆಟ್ಟಿಗರು ಈ ಯುವಕನ ಕಾಲೆಳೆದಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More