ಬೆಂಗಳೂರು: ತೆರಿಗೆ ವಂಚನೆ ಆರೋಪ, ಪೋಥಿಸ್ ಬಟ್ಟೆ ಶೋ ರೂಮ್ಗಳ ಮೇಲೆ ಐಟಿ ದಾಳಿ
ಆದಾಯ ತೆರಿಗೆ ವಂಚನೆ ಆರೋಪದಲ್ಲಿ ತಮಿಳುನಾಡು ಮೂಲದ ಪೋಥಿಸ್ನ ಬೆಂಗಳೂರಿನ ಬಟ್ಟೆ ಮಳಿಗೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಸುಮಾರು 30 ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಐಟಿ ದಾಳಿಯ ವಿಡಿಯೋ ಇಲ್ಲಿದೆ.
ಬೆಂಗಳೂರು, ಸೆಪ್ಟೆಂಬರ್ 12: ಬೆಂಗಳೂರಿನಲ್ಲಿ ಪೋಥಿಸ್ ಬಟ್ಟೆ ಶೋ ರೂಮ್ ಮೇಲೆ ಶುಕ್ರವಾರ ಬೆಳಗ್ಗೆ ಐಟಿ ದಾಳಿ ನಡೆದಿದೆ. ಮೈಸೂರು ರಸ್ತೆಯ ಟೆಂಬರ್ ಲೇಔಟ್ನಲ್ಲಿರುವ ಪೋಥಿಸ್ ಶೋ ರೂಮ್ಗೆ 25ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದೆ. ಗಾಂಧಿನಗರದಲ್ಲಿರುವ ಪೋಥಿಸ್ ಶೋ ರೂಮ್ ಮೇಲೂ ದಾಳಿ ನಡೆದಿದೆ. ಪೋಥಿಸ್ ಮಳಿಗೆ ತಮಿಳುನಾಡು ಮೂಲದ ಉದ್ಯಮಿಗೆ ಸೇರಿದ್ದಾಗಿದ್ದು, ಹೀಗಾಗಿ ಚೆನ್ನೈಯಿಂದಲೇ ಐಟಿ ಅಧಿಕಾರಿಗಳು ಬಂದಿದ್ದಾರೆ. ಆದಾಯ ತೆರಿಗೆ ವಂಚನೆ ಆರೋಪ ಹಿನ್ನೆಲೆ ದಾಳಿ ನಡೆದಿದೆ. ಕೆಲವೇ ವರ್ಷಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆದಿದ್ದ ಪೋಥಿಸ್ ಬಟ್ಟೆ ಮಳಿಗೆಯ ಶೋ ರೂಮ್ಗಳು ಬೆಂಗಳೂರು, ತಮಿಳುನಾಡು ಸೇರಿ ಹಲವು ಕಡೆ ಇವೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Sep 12, 2025 10:10 AM
Follow Us
Latest Videos
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ

